ಬುಧವಾರ, ಜೂನ್ 23, 2021
30 °C

ಬೀದರ್: 18 ವರ್ಷ ಮೇಲ್ಪಟ್ಟವರಿಗೆ ಮೇ 22ರಿಂದ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕಾಕರಣ ಶನಿವಾರ (ಮೇ 22) ಆರಂಭವಾಗಲಿದೆ.

ಬೀದರ್‌ನ ಪನ್ನಾಲಾಲ್ ಹೀರಾಲಾಲ್ ಮಹಾವಿದ್ಯಾಲಯದಲ್ಲಿ ಲಸಿಕಾ ಕೇಂದ್ರ ಸ್ಥಾಪಿಸಲಾಗಿದೆ. ಎಲ್ಲ ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಪ ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ ತಿಳಿಸಿದ್ದಾರೆ.

ಮೊದಲಿಗೆ ಕೋವಿಡ್ ಮುಂಚೂಣಿ ಕಾರ್ಯಕರ್ತರು, ವಿವಿಧ ಇಲಾಖೆಗಳ ನೌಕರರಿಗೆ ಲಸಿಕೆ ನೀಡಲಾಗುವುದು. ಬರುವ ದಿನಗಳಲ್ಲಿ ಎಲ್ಲರಿಗೂ ಲಸಿಕೆ ಕೊಡಲಾಗುವುದು ಎಂದು ಹೇಳಿದ್ದಾರೆ.

18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದು ಕೋವಿಡ್ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು. ಲಸಿಕಾ ಕೇಂದ್ರಕ್ಕೆ ಬರುವಾಗ ತಪ್ಪದೆ ಆಧಾರ್ ಕಾರ್ಡ್ ಹಾಗೂ ತಮ್ಮ ಇಲಾಖೆ ಗುರುತಿನ ಚೀಟಿ ತರಬೇಕು ಎಂದು ತಿಳಿಸಿದ್ದಾರೆ.

ಆಸ್ಪತ್ರೆಯಿಂದ 428 ಜನರ ಬಿಡುಗಡೆ

ಬೀದರ್: ಕೋವಿಡ್ ಸೋಂಕಿನಿಂದ ಗುಣಮುಖರಾದ 428 ಜನ ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಶುಕ್ರವಾರ ಹೊಸದಾಗಿ 84 ಜನರಿಗೆ ಸೋಂಕು ದೃಢಪಟ್ಟಿದೆ. 57 ಜನರು ಹೋಮ್ ಐಸೋಲೇಶನ್‍ಗೆ ಒಳಗಾಗಿದ್ದಾರೆ. 27 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸದ್ಯ ಒಟ್ಟು 558 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 672 ಜನ ಹೋಮ್ ಐಸೋಲೇಶನ್‍ನಲ್ಲಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 23,353 ಜನರಿಗೆ ಕೋವಿಡ್ ಬಾಧಿಸಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು