ಗುರುವಾರ , ಮೇ 26, 2022
29 °C

ಕ್ರಿಕೆಟ್‌: ಹುಬ್ಬಳ್ಳಿ ತಂಡದ ಮಡಲಿಗೆ ಟ್ರೋಫಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಉತ್ತರ ಕರ್ನಾಟಕ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಹುಬ್ಬಳ್ಳಿ ವಿಭಾಗ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿತು.

ಫೈನಲ್ ಪಂದ್ಯದಲ್ಲಿ ಹುಬ್ಬಳ್ಳಿ ವಿಭಾಗ ತಂಡವು ಬೆಳಗಾವಿ ವಿಭಾಗ ತಂಡವನ್ನು 8 ರನ್‍ಗಳಿಂದ ಮಣಿಸಿ ಟ್ರೋಫಿ ತನ್ನದಾಗಿಸಿಕೊಂಡಿತು.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಹುಬ್ಬಳ್ಳಿ ವಿಭಾಗ ತಂಡ ನಿಗದಿತ 12 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 85 ರನ್ ಪೇರಿಸಿತು. ನಂತರ ಬ್ಯಾಟಿಂಗ್‍ಗೆ ಇಳಿದ ಬೆಳಗಾವಿ ವಿಭಾಗ ತಂಡ 7 ವಿಕೆಟ್ ನಷ್ಟಕ್ಕೆ 77 ರನ್ ಗಳಿಸಿ ಸೋಲು ಅನುಭವಿಸಿತು.

ಟೂರ್ನಿಯಲ್ಲಿ ಹುಬ್ಬಳ್ಳಿ, ಬೆಳಗಾವಿ, ಧಾರವಾಡ, ಹೊಸಪೇಟೆ ಹಾಗೂ ರಾಯಚೂರು ವಿಭಾಗಗಳ ತಂಡಗಳು ಪಾಲ್ಗೊಂಡಿದ್ದವು.

ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಕ್ಕೆ ಟ್ರೋಫಿ ಪ್ರದಾನ ಮಾಡಲಾಯಿತು.
ಬೀದರ್‌ನ ಕಚ್ ಕಾಡವಾ ಪಟಿದಾರ್ ಸಂಸ್ಥಾನ ಸಮಾಜ ಯುವಕ ಮಂಡಲ (ಗುಜರಾತಿ ಸಮಾಜ) ಟೂರ್ನಿ ಆಯೋಜಿಸಿತ್ತು. ಮಂಡಲ ಅಧ್ಯಕ್ಷ ನಿಲೇಶ್ ಪಟೇಲ್, ಕಾರ್ಯದರ್ಶಿ ನರೇಶ್ ಪಟೇಲ್, ಟೂರ್ನಿಯ ರೂವಾರಿ ಗಳಾದ ಜಯೇಶ್ ಪಟೇಲ್, ಭಾವೇಶ್ ಪಟೇಲ್, ಹರೀಶ್ ಪಟೇಲ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.