ಶುಕ್ರವಾರ, ಮೇ 27, 2022
28 °C

ನದಿಯಲ್ಲಿ ಶವ ಪತ್ತೆ: ಕೊಲೆ ಶಂಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಔರಾದ್: ತಾಲ್ಲೂಕಿನ ಕಂದಗೂಳದ ಬಳಿ ಮಾಂಜ್ರಾ ನದಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಕೊಲೆ ಶಂಕೆ ವ್ಯಕ್ತವಾಗಿದೆ. 

‘30-35ರ ಆಸುಪಾಸು ವಯಸ್ಸಿನ ವ್ಯಕ್ತಿಯ ಶವವನ್ನು ಗೋಣಿ ಚೀಲದಲ್ಲಿ ಹಾಕಿ ನದಿಗೆ ಎಸೆಯಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಸಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಡಗಾಪುರ: ನದಿಗೆ ಹಾರಿ ರೈತ ಆತ್ಮಹತ್ಯೆ

ಔರಾದ್: ತಾಲ್ಲೂಕಿನ ಹೆಡಗಾಪುರ ಗ್ರಾಮದ ರೈತ ಕಾಶಿನಾಥ ಪಾಟೀಲ (65) ನಿಟ್ಟೂರ ಬಳಿ ಮಾಂಜ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರಿಗೆ 15 ಎಕರೆ ಜಮೀನಿದೆ.

ವಿವಿಧ ಬ್ಯಾಂಕ್‌ಗಳಿಂದ ಸಾಲ ಮಾಡಿದ್ದರು. ಅದನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಸಂಬಂಧಿಕರು ದೂರು ನೀಡಿದ್ದಾರೆ. ಈ ಸಂಬಂಧ ಠಾಣಾಕುಶನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.