ಭಾಲ್ಕಿ: ‘ಅತಿವೃಷ್ಟಿಯಿಂದಾದ ಬೆಳೆಹಾನಿಯ ಸಂಪೂರ್ಣ ವರದಿ ಬಂದ ತಕ್ಷಣ, ದೀಪಾವಳಿ ಹಬ್ಬದೊಳಗಾಗಿ ಬೀದರ್ ಜಿಲ್ಲೆಯ ಎಲ್ಲಾ ರೈತರಿಗೆ ಬೆಳೆಹಾನಿ ಪರಿಹಾರವನ್ನು ನೀಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಭಾನುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅತಿವೃಷ್ಟಿಯಿಂದಾದ ಹಾನಿ ಕುರಿತ ಸಮೀಕ್ಷಾ ವರದಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

‘ಈ ವರ್ಷ ಅತಿವೃಷ್ಟಿಯಿಂದ ಬೀದರ್ ಜಿಲ್ಲೆಯಾದ್ಯಂತ ರೈತರ ಬೆಳೆಗಳು, ರಸ್ತೆ ಮತ್ತು ಸೇತುವೆಗಳಿಗೆ ಭಾರಿ ಹಾನಿ ಸಂಭವಿಸಿದೆ. ಆಗಸ್ಟ್ ತಿಂಗಳ ಬೆಳೆಹಾನಿ ಸಮೀಕ್ಷಾ ವರದಿ ಈಗಾಗಲೇ ಲಭ್ಯವಾಗಿದೆ. ಇನ್ನೂ 2–3 ದಿನಗಳಲ್ಲಿ ಸೆಪ್ಟೆಂಬರ್ ತಿಂಗಳ ಸಮೀಕ್ಷಾ ವರದಿ ಸಹ ಲಭ್ಯವಾಗಲಿದೆ’ ಎಂದು ತಿಳಿಸಿದರು.

‘ಅತಿವೃಷ್ಟಿಯಿಂದ ಹಾಳಾದ, ಹಾನಿಗೊಳಗಾದ ರಸ್ತೆ ಹಾಗೂ ಸೇತುವೆ ಕುಸಿತ ಸ್ಥಳಗಳಲ್ಲಿ ತುರ್ತು ಮರು ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳನ್ನು ಶೀಘ್ರದಲ್ಲಿಯೇ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಹಶೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಣಮಂತರಾವ್ ಚವ್ಹಾಣ ಸೇರಿದಂತೆ ತಾಲ್ಲೂಕು ಅನುಷ್ಠಾನ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.