ಸೋಮವಾರ, ಆಗಸ್ಟ್ 2, 2021
27 °C

ಬೆಳೆ ಹಾನಿ: ಪರಿಹಾರಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಜಿಲ್ಲೆಯಲ್ಲಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸಬೇಕು ಎಂದು ವೆಲ್‍ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಘಟಕದ ಅಧ್ಯಕ್ಷ ಮುಬಾಶಿರ್ ಶಿಂಧೆ ಒತ್ತಾಯಿಸಿದ್ದಾರೆ.

ಔರಾದ್ ತಾಲ್ಲೂಕಿನ ಜೀರ್ಗಾ (ಬಿ), ಶೆಂಬೆಳ್ಳಿ, ಹೆಡಗಾಪುರ, ಮುಸ್ತಾಪುರ ಸೇರಿದಂತೆ ವಿವಿಧೆಡೆ ಜಮೀನುಗಳಿಗೆ ನೀರು ನುಗ್ಗಿದೆ. ಉದ್ದು, ಹೆಸರು, ತೊಗರಿ, ಸೋಯಾ, ಶೇಂಗಾ, ಗೋವಿನ ಜೋಳ, ಸಜ್ಜೆ, ಹತ್ತಿ ಹಾಗೂ ತರಕಾರಿ ಬೆಳೆಗಳು ಹಾನಿಗೀಡಾಗಿವೆ ಎಂದು ತಿಳಿಸಿದ್ದಾರೆ.

ರೈತರ ಸಂಕಷ್ಟವನ್ನು ಅರಿತು ರಾಜ್ಯ ಸರ್ಕಾರ ತಕ್ಷಣ ನೆರವಿಗೆ ಧಾವಿಸಬೇಕು. ಹಾಳಾದ ರಸ್ತೆ, ಕಾಲುವೆ, ಕೃಷಿ ಹೊಂಡ, ಬದುಗಳ ಪುನರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.