ಗುರುವಾರ , ಅಕ್ಟೋಬರ್ 29, 2020
21 °C

ಬೆಳೆ ಹಾನಿ: ಶೀಘ್ರ ಪರಿಹಾರಕ್ಕೆ ವಿಜಯಸಿಂಗ್ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಭಾರಿ ಮಳೆ ಕಾರಣ ಜಿಲ್ಲೆಯಲ್ಲಿ ಬೆಳೆ ಹಾನಿಗೀಡಾದ ರೈತರು ಹಾಗೂ ಮನೆ ಕಳೆದುಕೊಂಡವರಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಆಗ್ರಹಿಸಿದ್ದಾರೆ.

ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ನದಿ, ಕೆರೆ ಕಟ್ಟೆ ಹಾಗೂ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ ಎಂದು ತಿಳಿಸಿದ್ದಾರೆ.

ಹಲವು ಗ್ರಾಮಗಳು ನೀರಿನಲ್ಲಿ ಮುಳುಗಡೆಯಾಗಿವೆ. ಬೆಳೆ ಹಾನಿಯಾಗಿದೆ. ಮನೆಗಳು ಕುಸಿದಿವೆ. ಸಣ್ಣಪುಟ್ಟ ಸೇತುವೆ ಹಾಗೂ ರಸ್ತೆಗಳು ಕಿತ್ತುಕೊಂಡು ಹೋಗಿವೆ. ಜನರೊಂದಿಗೆ ಜಾನುವಾರುಗಳೂ ತೊಂದರೆಯಲ್ಲಿವೆ ಎಂದು ಹೇಳಿದ್ದಾರೆ.

ತೊಂದರೆಗೆ ಸಿಲುಕಿರುವ ಜನ ಹಾಗೂ ಜಾನುವಾರುಗಳನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಕಾಳಜಿ ಕೇಂದ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.