ಬೀದರ್ ಜಿಲ್ಲೆಯಾದ್ಯಂತ ಈಗಾಗಲೇ ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ 1.67 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾಳಾಗಿದೆ. ಡೇಟಾ ಎಂಟ್ರಿ ಕೆಲಸ ಶೇ 88ರಷ್ಟು ಮುಗಿದಿದೆ. ಇನ್ನುಳಿದ ಕೆಲಸ ಮುಗಿದ ತಕ್ಷಣ ರೈತರಿಗೆ ಪರಿಹಾರ ವಿತರಿಸುವ ಕೆಲಸ ಆರಂಭಿಸಲಾಗುವುದು.
ಶಿಲ್ಪಾ ಶರ್ಮಾ ಜಿಲ್ಲಾಧಿಕಾರಿ ಬೀದರ್
ಅತಿವೃಷ್ಟಿಯಿಂದ ಬೀದರ್ ಜಿಲ್ಲೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಸೇರಿದಂತೆ ಒಟ್ಟು ₹285 ಕೋಟಿಯಷ್ಟು ಹಾನಿ ಉಂಟಾಗಿದೆ. ಜಂಟಿ ಸಮೀಕ್ಷೆ ಮುಗಿದಿದ್ದು ಪೋರ್ಟಲ್‌ನಲ್ಲಿ ವಿವರ ದಾಖಲಿಸುವ ಕೆಲಸ ಅಂತಿಮ ಹಂತದಲ್ಲಿದೆ. ಶೀಘ್ರ ಪರಿಹಾರ ವಿತರಿಸಲಾಗುವುದು.