ಶುಕ್ರವಾರ, ಆಗಸ್ಟ್ 12, 2022
27 °C

ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಾನಂದ ಕುಂಬಾರ

ಬಸವಕಲ್ಯಾಣ: ತಾಲ್ಲೂಕಿನ ಗಿಲಗಿಲಿ ಗ್ರಾಮದ ಸಿಆರ್‌ಫಿಎಫ್ ಯೋಧ ಶಿವಾನಂದ ಕುಂಬಾರ (52) ಅವರು ಛತ್ತಿಸಗಡ್‌ದಲ್ಲಿನ ತಮ್ಮ ಕ್ಯಾಂಪ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಛತ್ತಿಸಗಡ್‌ನ ಸುಕಮಾ ಎಂಬಲ್ಲಿ ಇವರು ಎ.ಎಸ್.ಐ ಹುದ್ದೆಯಲ್ಲಿದ್ದರು. ಬುಧವಾರ ಬೆಳಿಗ್ಗೆ ತಮ್ಮ ಎ.ಕೆ. 47 ಗನ್‌ನಿಂದ ತಲೆಗೆ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜಿಲ್ಲೆಯ ಪೊಲೀಸ್ ಮೂಲಗಳು ದೃಢಪಡಿಸಿವೆ. ಈಚೆಗೆ ಲಾಕ್‌ಡೌನ್‌ ಸಂದರ್ಭದಲ್ಲಿ ಕುಟುಂಬ ಸಮೇತ ಊರಿಗೆ ಬಂದಿದ್ದ ಇವರು ನಂತರ ಒಬ್ಬರೇ ಛತ್ತಿಸಗಡಕ್ಕೆ ತೆರಳಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು