ಬೀದರ್: ತಾಯಂದಿರು ಬಾಲ್ಯದಲ್ಲೇ ಮಕ್ಕಳಲ್ಲಿ ಸದ್ಗುಣಗಳನ್ನು ಬೆಳೆಸಬೇಕು ಎಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಜಿ. ಹೇಳಿದರು.
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಗರದ ಮಾಮನಕೇರಿಯ ಜ್ಞಾನಸುಧಾ ವಿದ್ಯಾಲಯದಲ್ಲಿ ಆಯೋಜಿಸಿದ್ದ ತಾಯಂದಿರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳ ಭವಿಷ್ಯ ಉಜ್ವಲಗೊಳಿಸುವಲ್ಲಿ ಶಾಲೆ ಜತೆಗೆ ಪಾಲಕರ ಪಾತ್ರವೂ ಬಹಳ ಮುಖ್ಯವಾಗಿದೆ ಎಂದು ತಿಳಿಸಿದರು.
ಮಕ್ಕಳು ಅಭ್ಯಾಸದಲ್ಲಿ ತೊಡಗಿದ್ದ ವೇಳೆ ಪಾಲಕರೂ ಉತ್ತಮ ಪುಸ್ತಕ ಓದುತ್ತ ಕುಳಿತುಕೊಳ್ಳಬೇಕು. ಹಾಗಾದಲ್ಲಿ ಮಕ್ಕಳಲ್ಲಿ ಅಧ್ಯಯನ ಆಸಕ್ತಿ ಇನ್ನಷ್ಟು ಹೆಚ್ಚಲಿದೆ ಎಂದು ಹೇಳಿದರು.
ಸಂಸ್ಥೆಯ ನಿರ್ದೇಶಕ ಮುನೇಶ್ವರ ಲಾಖಾ ಮಾತನಾಡಿ, ಪಾಲಕರು ಮಕ್ಕಳಿಗೆ ಅವರ ಆಸಕ್ತಿಯ ಕ್ಷೇತ್ರದಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಬೇಕು. ಹಾಗಾದಲ್ಲಿ ಅವರು ಸಾಧನೆ ಮಾಡಲು ಅನುಕೂಲವಾಗುತ್ತದೆ ಎಂದು ನುಡಿದರು.
ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗಿ ಜ್ಞಾನಸುಧಾ ವಿದ್ಯಾಲಯದಲ್ಲಿ ವಿವಿಧ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಬೀದರ್ ಮಹಿಳಾ ಬ್ಯಾಂಕ್ ಮಾಜಿ ಅಧ್ಯಕ್ಷೆ ಮಹಾನಂದ ಹಾಲಹಳ್ಳಿ ಉದ್ಘಾಟಿಸಿದರು. ಜ್ಞಾನಸುಧಾ ವಿದ್ಯಾಲಯದ ಪ್ರಾಚಾರ್ಯೆ ಸುನಿತಾ ಸ್ವಾಮಿ, ಉಪ ಪ್ರಾಚಾರ್ಯೆ ಕಲ್ಪನಾ, ಮೇಲ್ವಿಚಾರಕಿ ರಜನಿ, ಸಾಯಿ ಗೀತಾ, ವಸಿಮಾ ಇದ್ದರು.
ಬಲೂನ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ತಾಯಂದಿರು ಬಲೂನ್ ಒಡೆದು ಸಂಭ್ರಮಿಸಿದರು.
ಬಲೂನ್ ಒಡೆಯುವ ಸ್ಪರ್ಧೆಯಲ್ಲಿ ವರ್ಷಾ (ಪ್ರಥಮ), ದೇಬಾಷ್ಮಿತಾ ಬೇಹರಾ (ದ್ವಿತೀಯ), ಸುರೇಖಾ (ತೃತೀಯ) ಬಹುಮಾನ ಪಡೆದರು. ‘ಗೆದ್ದವರು' ಸ್ಪರ್ಧೆಯಲ್ಲಿ ಶ್ರೀದೇವಿ (ಪ್ರಥಮ), ಪೂಜಾ (ದ್ವಿತೀಯ), ರೇಣುಕಾ (ತೃತೀಯ) ಗಳಿಸಿದರು.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ ₹ 3 ಸಾವಿರ, ದ್ವಿತೀಯ ಬಹುಮಾನ ₹ 2 ಸಾವಿರ ಹಾಗೂ ತೃತೀಯ ಬಹುಮಾನ ₹ 1 ಸಾವಿರ ನೀಡಿ ಗೌರವಿಸಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.