ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಂಪರೆ ನಗರಿಯಲ್ಲಿ ಕಲಾವಿದರ ಕಲರವ

ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಪ್ರಥಮ ವರ್ಷಾಚರಣೆ; ಸಾಂಸ್ಕೃತಿಕ, ಜನಪದ ಉತ್ಸವದ ಸಡಗರ
Last Updated 26 ಜುಲೈ 2022, 15:50 IST
ಅಕ್ಷರ ಗಾತ್ರ

ಬೀದರ್‌: ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಪ್ರಥಮ ವರ್ಷಾಚರಣೆ, ಸಾಂಸ್ಕೃತಿಕ ಮತ್ತು ಜನಪದ ಉತ್ಸವಕ್ಕೆ ಪರಂಪರೆ ನಗರ ಅಣಿಯಾಗಿದೆ. ಬಳ್ಳಾರಿ, ಕೊಪ್ಪಳ, ರಾಯಚೂರು ಸೇರಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ 2 ಸಾವಿರ ಕಲಾವಿದರು ಜುಲೈ 27 ಹಾಗೂ 28ರಂದು ಕೋಟೆನಗರಿಯಲ್ಲಿ ವಿಶಿಷ್ಟ ಪ್ರದರ್ಶನ ನೀಡಲಿದ್ದಾರೆ.

ಬುಧವಾರ ಬೆಳಿಗ್ಗೆ 8.30ಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ರಂಗ ಮಂದಿರವರೆಗೆ ನಡೆಯುವ ವಿವಿಧ ಕಲಾ ತಂಡಗಳ ಮೆರವಣಿಗೆಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಚಾಲನೆ ನೀಡುವರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಭೀಮಾಶಂಕರ ತಗ್ಗೆಳ್ಳಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ ಪಾಲ್ಗೊಳ್ಳುವರು.

ನಗರಸಭೆ ಪೌರಾಯುಕ್ತ ಪ್ರಬುದ್ಧ ಕಾಂಬಳೆ, ವಿಧಾನ ಪರಿಷತ್‌ ಸದಸ್ಯ ವಿಜಯಸಿಂಗ್‌, ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ದೆ, ಚಂದ್ರಶೇಖರ ಬಿರಾದಾರ, ಫರ್ನಾಂಡಿಸ್ ಹಿಪ್ಪಳಗಾಂವ, ಅಬ್ದುಲ್ ಜಬ್ಬಾರ್ ಹಾಗೂ ಎಸ್‌.ವಿ. ಕಲ್ಮಠ ಭಾಗವಹಿಸುವರು.

ಉದ್ಘಾಟನೆ ಕಾರ್ಯಕ್ರಮ: ಬೆಳಿಗ್ಗೆ 10.30ಕ್ಕೆ ಪೂಜ್ಯ ಚೆನ್ನಬಸವ ಪಟ್ಟದ್ದೇವರ ರಂಗ ಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲಕುಮಾರ ಉದ್ಘಾಟಿಸುವರು. ಬಸವಲಿಂಗ ಪಟ್ಟದ್ದೇವರು, ಶಿವಾನಂದ ಸ್ವಾಮೀಜಿ, ಸಿದ್ಧರಾಮ ಶರಣರು ಸಾನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಭಗವಂತ ಖೂಬಾ, ವಿಧಾನ ಪರಿಷತ್‌ ಸಭಾಪತಿ ರಘುನಾಥರಾವ್ ಮಲ್ಕಾಪುರೆ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಪಾಲ್ಗೊಳ್ಳುವರು. ಶಾಸಕ ರಹೀಂ ಖಾನ್‌ ಅಧ್ಯಕ್ಷತೆ ವಹಿಸಲಿದ್ದಾರೆ.ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಗೌರವ ಅಭಿನಂದನೆ ನಡೆಯಲಿದೆ.

ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಸೋಮಶೇಖರ, ಕೆಎಸ್‌ಐಐಡಿಸಿ ಅಧ್ಯಕ್ಷ ಶೈಲೇಂದ್ರ ಕೆ. ಬೆಲ್ದಾಳೆ, ಶಾಸಕರಾದ ಈಶ್ವರ ಖಂಡ್ರೆ, ರಾಜಶೇಖರ ಪಾಟೀಲ, ಬಂಡೆಪ್ಪ ಕಾಶೆಂಪೂರ, ಶರಣು ಸಲಗರ, ಬುಡಾ ಅಧ್ಯಕ್ಷ ಬಾಬು ವಾಲಿ, ಲೀಲಾ ಕಾರಟಗಿ, ರೇವಣಸಿದ್ದಪ್ಪ ಜಲಾದೆ, ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಶ್ರೀನಿವಾಸ ಜಿ.ಕಪ್ಪಣ್ಣ ಭಾಗವಹಿಸುವರು.

ಮಧ್ಯಾಹ್ನ 3.30ಕ್ಕೆ ಕಲಾ ತಂಡಗಳು ವೇದಿಕೆ ಮೇಲೆ ವೇದಿಕೆ ಪ್ರದರ್ಶನ ನೀಡುವರು. ಕರ್ನಾಟಕ ಜಾನಪದ ಅಕಾಡೆಮಿಯ ಬಿ. ಟಾಕಪ್ಪ ಕಣ್ಣೂರ ಉದ್ಘಾಟಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್‌.ಚನ್ನೂರ, ಸುರೇಶ ಚೆನಶೆಟ್ಟಿ, ಅಬ್ದುಲ್‌ ಖದೀರ್‌, ಭಾರತಿ ವಸ್ತ್ರದ, ಪೂರ್ಣಿಮಾ ಜಿ, ಮಹೇಶ ಪಾಟೀಲ, ಎಂ.ಎಸ್.ಮನೋಹರ, ರಾಜೇಂದ್ರಸಿಂಗ್‌ ಪಾವಾರ ಪಾಲ್ಗೊಳ್ಳುವರು. ಸಂಜೆ 7 ಗಂಟೆಗೆ ನಾಟಕ ಪ್ರದರ್ಶನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT