ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಂಸ್ಕೃತಿಕ ಸಂಜೆಕಾರ್ಯಕ್ರಮ ಇಂದಿನಿಂದ

ರಂಗ ಮಂದಿರದಲ್ಲಿ ಮೂರು ದಿನ ನಾಟಕ ಪ್ರದರ್ಶನ
Last Updated 26 ಡಿಸೆಂಬರ್ 2019, 11:13 IST
ಅಕ್ಷರ ಗಾತ್ರ

ಬೀದರ್‌: ಜನಜನಿತ ಕಲಾ ಪ್ರದರ್ಶನ ಸಂಘ, ಕರ್ನಾಟಕ ಸಾಹಿತ್ಯ ಸಂಘ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಮೂರು ದಿನಗಳ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ಡಿಸೆಂಬರ್ 26, 27 ಹಾಗೂ 28ರಂದು ಜಿಲ್ಲಾ ರಂಗ ಮಂದಿರದಲ್ಲಿ ನಡೆಯಲಿದೆ.

ಗುರುವಾರ ಸಂಜೆ 6 ಗಂಟೆಗೆ ಜಿಲ್ಲಾಧಿಕಾರಿ ಎಚ್‌.ಆರ್‌.ಮಹಾದೇವ ಉದ್ಘಾಟಿಸುವರು. ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಚ್‌.ಡಿ. ನಾರಾಯಣಸ್ವಾಮಿಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಕರ್ನಾಟಕ ಜಾನಪದ ಪರಿಷತ್ ಕಲ್ಯಾಣ ಕರ್ನಾಟಕ ವಿಭಾಗದ ಸಂಯೋಜಕ ಜಗನ್ನಾಥ ಹೆಬ್ಬಾಳೆ ಅಧ್ಯಕ್ಷತೆ ವಹಿಸುವರು.

ಅತಿಥಿಗಳಾಗಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ, ಜಿಲ್ಲಾ ಪಂಚಾಯಿತಿ ಸದಸ್ಯ ಗುಂಡು ರೆಡ್ಡಿ, ಪಿಎಸ್‌ಐ ಗುರು ಪಾಟೀಲ, ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಲ್ಲಮ್ಮ ಸಂತಾಜಿ, ಯುವ ಮುಖಂಡ ಬಸು ಹಿಲಾಲಪುರ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಮಿಸ್‌ ಇಂಡಿಯಾ ಇಂಟರ್‌ನ್ಯಾಷನಲ್‌ ನಿಶಾ ತಾಳಂಪಳ್ಳಿ ಅವರನ್ನು ಸನ್ಮಾನಿಸಲಾಗುವುದು.

ನಂತರ ಉಮೇಶ ತೇಲಿ ನಿರ್ದೇಶನದಲ್ಲಿ ಯಶವಂತ ಹಾಗೂ ತಂಡದವರು ‘ಹುಚ್ಚರ ಸಂತೆ’ ನಾಟಕ ಪ್ರದರ್ಶಿಸಲಿದ್ದಾರೆ. ಪ್ರಕಾಶ ಹಾಗೂ ತಂಡದವರು ಗೀಗೀಪದ ಹಾಡುವರು.

27 ರಂದು ಸಂಜೆ 6 ಗಂಟೆಗೆ ಶಾಸಕ ಬಂಡೆಪ್ಪ ಕಾಶೆಂಪೂರ್ ಕಾರ್ಯಕ್ರಮ ಉದ್ಘಾಟಿಸುವರು. ಉದ್ಯಮಿ ಚಂದ್ರಶೇಖರ ಹೆಬ್ಬಾಳೆ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ಪರ್ತಕರ್ತ ಅಪ್ಪಾರಾವ್ ಸೌದಿ, ಡೆನ್‌ ನೆಟವರ್ಕ್‌ ಮಾಲೀಕ ರವಿ ಸ್ವಾಮಿ, ನಗರಸಭೆ ಸದಸ್ಯ ಧನರಾಜ್‌ ಹಂಗರಗಿ, ಫರ್ನಾಂಡೀಸ್‌ ಹಿಪ್ಪಳಗಾಂವ್‌ ಪಾಲ್ಗೊಳ್ಳಲಿದ್ದಾರೆ.

ಸಂಜೆ ಉಮೇಶ ತೇಲಿ ನಿರ್ದೇಶನದಲ್ಲಿ ವಿಕಾಸ ಹಾಗೂ ತಂಡದವರು ’ನಿರುತ್ತರ ಕುಮಾರ’ ನಾಟಕ ಪ್ರದರ್ಶಿಸುವರು. ಶರಣು ಗೌಳಿ ಹಾಗೂ ತಡ ರಂಗ ಗೀತೆಗಳನ್ನು ಹಾಡಲಿದೆ.

28ರಂದು ಸಂಜೆ 6 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಾಹಿತಿ ಎಂ.ಜಿ. ದೇಶಪಾಂಡೆ, ಸಿಪಿಐ ಶ್ರೀಕಾಂತ ಅಲ್ಲಾಪುರೆ, ಪರಿಶಿಷ್ಟ ಜಾತಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಂಭು ಸಾಗರ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಲುಂಬಿಣಿ ಗೌತಮ, ಯುವ ಮುಖಂಡ ಅನಿಲ ಬೆಲ್ದಾರ್ ಭಾಗವಹಿಸುವರು.ಯಶವಂತ ಕುಚಬಾಳ ನಿರ್ದೇಶನದಲ್ಲಿ ಪ್ರಕಾಶ ಹಾಗೂ ತಂಡದವರು ‘ಎಚ್ಚರ ಎಚ್ಚರ’ ನಾಟಕ ಪ್ರದರ್ಶಿಸಲಿದ್ದಾರೆ. ಜೈಭೀಮ ಹಾಗೂ ತಂಡದವರು ಜಾನಪದ ಗೀತೆಗಳನ್ನು ಹಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT