ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗೆ ಕಡಿವಾಣ ಹಾಕಿ

Last Updated 11 ಅಕ್ಟೋಬರ್ 2022, 14:47 IST
ಅಕ್ಷರ ಗಾತ್ರ

ಬೀದರ್: ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಠ್ಯೇತರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಶಾಸಕ ಬಂಡೆಪ್ಪ ಕಾಶೆಂಪುರ ಆಗ್ರಹಿಸಿದ್ದಾರೆ.

ತಾಲ್ಲೂಕಿನ ಕಮಠಾಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರ್‍ಎಸ್‍ಎಸ್ ಶಿಬಿರ ಆಯೋಜಿಸಿ, ಪಠ್ಯೇತರ ಚಟುವಟಿಕೆಯತ್ತ ಮಕ್ಕಳನ್ನು ಸೆಳೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಹಿಂದೆ ಬೇರೆಡೆ ಶಿಬಿರ ನಡೆಸುತ್ತಿದ್ದ ಆರ್‍ಎಸ್‍ಎಸ್‍ನವರು ಇದೀಗ ಸರ್ಕಾರಿ ಶಾಲೆ ಹಾಗೂ ವಸತಿ ಶಾಲೆಗಳಿಗೂ ಲಗ್ಗೆ ಇಡುತ್ತಿದ್ದಾರೆ. ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ವಸತಿ ಶಾಲೆಯಲ್ಲಿ ಶಿಬಿರ ಆಯೋಜಿಸಿರುವುದನ್ನು ಖಂಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ವಸತಿ ಶಾಲೆಯಲ್ಲಿ ಶಿಬಿರಕ್ಕೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಸ್ಥಳ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಬಿರ ನಡೆಸಲು ಅವಕಾಶ ಕೊಡಬಾರದು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT