ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‍ನಿಂದ ಸೈಕಲ್ ಜಾಥಾ ಇಂದು

Last Updated 6 ಜುಲೈ 2021, 14:15 IST
ಅಕ್ಷರ ಗಾತ್ರ

ಬೀದರ್: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಜುಲೈ 7 ರಂದು ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸೈಕಲ್ ಜಾಥಾ ನಡೆಸಲಿದೆ.

ಜಿಲ್ಲಾ ಕೇಂದ್ರದಲ್ಲಿ ಪಕ್ಷದ ಚುನಾಯಿತ ಪ್ರತಿನಿಧಿಗಳು, ಮುಖಂಡರು, ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜಾಥಾ ನಡೆಸಲಿದ್ದಾರೆ.

ಬೀದರ್‌ನ ನೌಬಾದ್ ಬಸವೇಶ್ವರ ವೃತ್ತದಲ್ಲಿ ಬೆಳಿಗ್ಗೆ 10.30ಕ್ಕೆ ಜಾಥಾ ಆರಂಭವಾಗಲಿದೆ. ಅಲ್ಲಿಂದ ಪ್ರತಾಪನಗರ, ಶಿವನಗರ, ಮಡಿವಾಳ ವೃತ್ತ, ರೋಟರಿ ಕನ್ನಡಾಂಬೆ ವೃತ್ತ, ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ವರೆಗೆ ಸೈಕಲ್ ಜಾಥಾ ನಡೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ತಿಳಿಸಿದ್ದಾರೆ.

ಕೆಪಿಸಿಸಿ ವಕ್ತಾರರಾದ ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಓಬೆದುಲ್ಲಾ ಷರೀಫ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಶಾಸಕರಾದ ರಹೀಂಖಾನ್, ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ ಭಾಗವಹಿಸುವರು ಎಂದು ಹೇಳಿದ್ದಾರೆ.

ಪಕ್ಷದ ಜಿಲ್ಲಾ ಘಟಕ, ಎಲ್ಲ ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT