ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬುಡಾದಲ್ಲಿ ದಲಿತರಿಗೆ ಪ್ರಾತಿನಿಧ್ಯಕ್ಕೆ ಆಗ್ರಹ: ಸಚಿವ ರಹೀಂ ಖಾನ್‌ಗೆ ಮನವಿ

Published 23 ನವೆಂಬರ್ 2023, 14:27 IST
Last Updated 23 ನವೆಂಬರ್ 2023, 14:27 IST
ಅಕ್ಷರ ಗಾತ್ರ

ಬೀದರ್‌: ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಬುಡಾ) ಈ ಸಲ ದಲಿತ ಸಮುದಾಯದವರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಈ ಸಂಬಂಧ ಒಕ್ಕೂಟದ ಮುಖಂಡರು ಪೌರಾಡಳಿತ ಸಚಿವ ರಹೀಂ ಖಾನ್‌ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ವಿವಿಧ ಹುದ್ದೆಗಳಿಗೆ ಇತರೆ ವರ್ಗದವರನ್ನು ನೇಮಕ ಮಾಡಲಾಗಿದೆ. ಆದರೆ, ಇದುವರೆಗೆ ದಲಿತ ಸಮಾಜಕ್ಕೆ ಪ್ರಾತಿನಿಧ್ಯ ಸಿಕ್ಕಿಲ್ಲ. ಹಾಗಾಗಿ ಆ ಸಮಾಜದ ಮುಖಂಡ ಬಾಬುರಾವ ಪಾಸ್ವಾನ್‌ ಅವರಿಗೆ ಆದ್ಯತೆ ನೀಡಬೇಕು. ಪ್ರಾಧಿಕಾರದ ಅಧ್ಯಕ್ಷರಾಗಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಪಾಸ್ವಾನ್‌ ಅವರು ಅನೇಕ ವರ್ಷಗಳಿಂದ ಶೋಷಿತ ಸಮುದಾಯದವರ ಕಲ್ಯಾಣಕ್ಕಾಗಿ ಶ್ರಮಿಸುತ್ತ ಬಂದಿದ್ದಾರೆ. ಜಿಲ್ಲಾ ಕಾಂಗ್ರೆಸ್‌ ಪಕ್ಷದಲ್ಲಿ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ರಹೀಂ ಖಾನ್‌ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇಷ್ಟೆಲ್ಲ ಕೆಲಸ ಮಾಡಿರುವ ಪಾಸ್ವಾನ್‌ ಅವರಿಗೆ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಿಸಿದರೆ ದಲಿತ ಸಮಾಜಕ್ಕೆ ಪ್ರಾತಿನಿಧ್ಯ ನೀಡಿದಂತಾಗುತ್ತದೆ. ಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ನೆರವಾಗುತ್ತದೆ ಎಂದು ತಿಳಿಸಿದ್ದಾರೆ.

ಭಾರತೀಯ ಭೀಮ ಸೇನೆ ರಾಷ್ಟ್ರೀಯ ಉಪಾಧ್ಯಕ್ಷ ಅಶೋಕ ಮಾಳಗೆ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಶಿವಕುಮಾರ ನೀಲಿಕಟ್ಟಿ, ದಲಿತ ಸೇನೆ ಜಿಲ್ಲಾಧ್ಯಕ್ಷ ಶ್ರೀಪತರಾವ ದೀನೆ, ಸಂವಿಧಾನ ಸಂರಕ್ಷಣಾ ಸಮಿತಿ ಮಹಾಪ್ರಧಾನ ಕಾರ್ಯದರ್ಶಿ ಅನೀಲಕುಮಾರ ಬೆಲ್ದಾರ, ಕರ್ನಾಟಕ ದಲಿತ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಅಂಬಾದಾಸ ಗಾಯಕವಾಡ, ಭಾರತೀಯ ಜೈಭೀಮ ದಳದ ವಿಭಾಗೀಯ ಸಂಚಾಲಕ ಮಾರುತಿ ಕಂಟಿ, ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಸಂದೀಪ ಕಾಂಟೆ, ರಾಷ್ಟ್ರೀಯ ದಲಿತ ಬ್ರಿಗೇಡ್‌ ಸಂಸ್ಥಾಪಕ ಅವಿನಾಶ ದೀನೆ, ಪ್ರಜಾ ಶಕ್ತಿ ಸಮಿತಿ ಜಿಲ್ಲಾಧ್ಯಕ್ಷ ಸಾಯಿ ಸಿಂಧೆ, ಕರ್ನಾಟಕ ಕೂಲಿ ಕಾರ್ಮಿಕ ಸಂಘದ ಸಂಸ್ಥಾಪಕ ಅಧ್ಯಕ್ಷ ರಮೇಶ ಪಾಸ್ವಾನ, ಭಾರತೀಯ ವಿದ್ಯಾರ್ಥಿ ಸಂಘದ  ಜಿಲ್ಲಾ ಅಧ್ಯಕ್ಷ ಪ್ರದೀಪ ನಾಟೇಕರ್, ಯುವ ಮುಖಂಡ ಪವನ ಮಿಠಾರೆ ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT