ಮಂಗಳವಾರ, ಅಕ್ಟೋಬರ್ 27, 2020
28 °C

ತೋಟಗಾರಿಕೆ ಬೆಳೆ ಹಾನಿ:ಪರಿಹಾರಕ್ಕೆ ಅರಳಿ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲೆಯಲ್ಲಿ ಮಳೆಯಿಂದ ತೋಟಗಾರಿಕೆ ಬೆಳೆ ಹಾನಿಗೊಳಗಾದ ರೈತರಿಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಒತ್ತಾಯಿಸಿದ್ದಾರೆ.

ತೋಟಗಾರಿಕೆ ಸಚಿವ ನಾರಾಯಣ ಗೌಡ ಅವರಿಗೆ ಈ ಕುರಿತು ಪತ್ರ ಬರೆದಿದ್ದಾರೆ.

ಅತಿವೃಷ್ಟಿಯ ಕಾರಣ ಜಿಲ್ಲೆಯ 5 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಟೊಮೆಟೊ, ಶುಂಠಿ, ಪಪಾಯ, ಬಾಳೆ ಮೊದಲಾದ ಬೆಳೆಗಳು ಹಾನಿಗೀಡಾಗಿವೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ರೈತರು ಅನೇಕ ವರ್ಷಗಳಿಂದ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಬೆಳೆ ಹಾನಿಗೊಳಗಾಗುತ್ತಿದ್ದಾರೆ. ಈ ಬಾರಿಯೂ ಬೆಳೆ ಹಾನಿಯಿಂದ ಕಂಗಾಲಾಗಿದ್ದಾರೆ ಎಂದು ಹೇಳಿದ್ದಾರೆ.

ಆದಷ್ಟು ಬೇಗ ಬೆಳೆ ಹಾನಿ ಸಮೀಕ್ಷೆ ನಡೆಸಿ, ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು