ಶನಿವಾರ, ಜನವರಿ 23, 2021
28 °C

ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿಗೆ ದಾನಿ ಬಾಬುರಾವ್ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ದಾನಿ ಬಾಬುರಾವ್ ಅವರನ್ನು ನೇಮಕ ಮಾಡಲಾಗಿದೆ.

ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಹುಲೀಕಲ್ ನಟರಾಜ್, ಇಸ್ರೋ ನಿವೃತ್ತ ಅಧ್ಯಕ್ಷ ಡಾ.ಎ.ಎಸ್ ಕಿರಣಕುಮಾರ, ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನದಾಸ್ ನೇತೃತ್ವದಲ್ಲಿ ದೊಡ್ಡಬಳ್ಳಾಪುರದಲ್ಲಿ ಈಚೆಗೆ ನಡೆದ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ದಾನಿ ಬಾಬುರಾವ್ ಅವರನ್ನು ಆಯ್ಕೆ ಮಾಡಿ ನೇಮಕಾತಿ ಪತ್ರವನ್ನು ನೀಡಲಾಗಿದೆ.

ಪರಿಷತ್ತು ನಾಡಿನ ಪ್ರಗತಿಪರ ಚಿಂತಕರನ್ನು ಒಳಗೊಂಡ ಸಂಘಟನೆಯಾಗಿದೆ. ಸಮಾಜದಲ್ಲಿ ಮನೆ ಮಾಡಿರುವ ಕಂದಾಚಾರಗಳನ್ನು ಹೋಗಲಾಡಿಸುವುದು ಮತ್ತು ದೆವ್ವ, ಭೂತ, ಬ್ಲ್ಯಾಕ್ ಮ್ಯಾಜಿಕ್‍ನಂತಹ ವಿಷಯಗಳ ಬಗ್ಗೆ ಪವಾಡ ಬಯಲು ಮಾಡುವ ಮೂಲಕ ಜನರಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಲು ನಿರಂತರವಾಗಿ ಶ್ರಮಿಸುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು