ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್ | ದತ್ತಗಿರಿ ಶಾಲೆಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Published 30 ಮೇ 2024, 14:36 IST
Last Updated 30 ಮೇ 2024, 14:36 IST
ಅಕ್ಷರ ಗಾತ್ರ

ಬೀದರ್: ಇಲ್ಲಿನ ಬಸವನಗರ ಕಾಲೊನಿಯ ದತ್ತಗಿರಿ ಮಹಾರಾಜ ಶಿಕ್ಷಣ ಸಂಸ್ಥೆಯಲ್ಲಿ 2023–24ನೇ ಸಾಲಿನ ದ್ವಿತೀಯ ಪಿಯುಸಿ, ಸಿಬಿಎಸ್‍ಇ ಹತ್ತನೇ, ಎಸ್‍ಎಸ್‍ಎಲ್‍ಸಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ಸಂಸ್ಥೆ ಸಂಚಾಲಿತ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಪಾಲಕರನ್ನು ಬುಧವಾರ ಸನ್ಮಾನಿಸಲಾಯಿತು.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 94 ರಷ್ಟು ಅಂಕ ಪಡೆದ ಕೆ. ರಶ್ಮಿ ರವೀಂದ್ರ, ಸಿಬಿಎಸ್‍ಇ ಹತ್ತನೇ ಪರೀಕ್ಷೆಯಲ್ಲಿ ಶೇ 95  ಅಂಕ ಗಳಿಸಿದ ನರೇಶ ಮಲ್ಲಿಕಾರ್ಜುನ, ಎಸ್‍ಎಸ್‍ಎಲ್‍ಸಿ ಕನ್ನಡ ಮಾಧ್ಯಮ ಪರೀಕ್ಷೆಯಲ್ಲಿ ಶೇ 95 ಅಂಕ ಪಡೆದ ಶ್ರೀಕರಿ ಜೋಶಿ ರಾಮ ಜೋಶಿ ಹಾಗೂ ಆಂಗ್ಲ ಮಾಧ್ಯಮ ಪರೀಕ್ಷೆಯಲ್ಲಿ ಶೇ 91ಅಂಕ ಗಳಿಸಿದ ಓಂಸಾಯಿ ವಿನೋದಕುಮಾರ ಅವರನ್ನು ಶಾಲು ಹೊದಿಸಿ, ಹೂಮಾಲೆ ಹಾಕಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಶೇ 80ಕ್ಕೂ ಅಧಿಕ ಅಂಕ ಪಡೆದ ಒಟ್ಟು 45 ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಶಿವರಾಜ ಪಾಟೀಲ ಮಾತನಾಡಿ, ಸಂಸ್ಥೆಯ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕಾರ, ಗುಣಮಟ್ಟದ ಶಿಕ್ಷಣ ಕೊಡಲಾಗುತ್ತಿದೆ. ಅದರ ಫಲವಾಗಿ ವಿವಿಧ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರುತ್ತಿದ್ದಾರೆ ಎಂದು ಹೇಳಿದರು.

ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಅವಧೂತಗಿರಿ ಮಹಾರಾಜ, ಮಹಾಂತ ಸಿದ್ಧೇಶ್ವರ ಆನಂದಗಿರಿ ಮಹಾರಾಜ, ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಹತ್ತಿ, ಸಂಸ್ಥೆಯ ಉಪಾಧ್ಯಕ್ಷ ರಮೇಶ ಜಿ. ದುಕಾನದಾರ್, ಜಂಟಿ ಕಾರ್ಯದರ್ಶಿ ಸಾಯಿರಾಮ ಅಲ್ಲಾಡಿ, ಖಜಾಂಚಿ ಪ್ರಭಾಕರ ಮೈಲಾಪುರೆ, ಸದಸ್ಯರಾದ ಶಾಂತಾಬಾಯಿ ಯರಮಲ್ಲಿ, ರವಿ ಮಲಸಾ, ಬಸವರಾಜ ದೇಗಮಲಡಿ, ಪ್ರಾಚಾರ್ಯರಾದ ಮಹಾದೇವಿ ಬೀದೆ, ಧನರಾಜ ಖಾಜಾಪುರೆ, ರೂಪಾ ಜೋಶಿ, ಸಂಸ್ಥೆಯ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT