ಶನಿವಾರ, ಜುಲೈ 31, 2021
21 °C

ಕೋವಿಡ್‌ ಮಾಹಿತಿ ಪಡೆದ ನೂತನ ಡಿ.ಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಬೆಂಗಳೂರಿನಿಂದ ಗುರುವಾರ ಇಲ್ಲಿಗೆ ಬಂದ ನೂತನ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌., ಅವರು ವಿಮಾನ ನಿಲ್ದಾಣದಲ್ಲೇ ಜಿಲ್ಲೆಯಲ್ಲಿನ ಕೋವಿಡ್‌–19 ಸ್ಥಿತಿಗತಿ ಕುರಿತು ಮಾಹಿತಿ ಪಡೆದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ.ರೆಡ್ಡಿ ಅವರು ಮಾಹಿತಿ ಒದಗಿಸಿದರು.

ಪ್ರಯಾಣಿಕರ ಪರೀಕ್ಷೆ ಸೇರಿ ವಿಮಾನ ನಿಲ್ದಾಣದಲ್ಲಿ ಇರುವ ವ್ಯವಸ್ಥೆಗಳ ಬಗ್ಗೆ ವೈದ್ಯಾಧಿಕಾರಿ ಡಾ. ವಾಫಿಯಾ ಬೇಗಂ ಅವರಿಂದ ಪಡೆದುಕೊಂಡರು.

ಇದಕ್ಕೂ ಮುನ್ನ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಅಕ್ಷಯ್ ಶ್ರೀಧರ, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭಂವರಸಿಂಗ್ ಮೀನಾ ಅವರು ರಾಮಚಂದ್ರನ್‌ ಅವರನ್ನು ಹೂಗುಚ್ಛ ನೀಡಿ ಬರಮಾಡಿಕೊಂಡರು.

ಜಿಲ್ಲೆಯ ಹಿತಕ್ಕಾಗಿ ಕಾರ್ಯ ನಿರ್ವಹಿಸುವೆ. ಜನರ ಬೇಕು, ಬೇಡಿಕೆಗಳಿಗೆ ಸ್ಪಂದಿಸುವೆ ಎಂದು ರಾಮಚಂದ್ರನ್‌ ಅವರು ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.