ಮಂಗಳವಾರ, ಮೇ 17, 2022
29 °C

ಕೋವಿಶೀಲ್ಡ್ ಲಸಿಕೆ ಪಡೆದ ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಸೋಮವಾರ ಇಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದರು.

ರಾಮಚಂದ್ರನ್ ಅವರು ಲಸಿಕೆ ಪಡೆಯುವುದಕ್ಕಾಗಿಯೇ ಬೆಳಿಗ್ಗೆ ಮಂಗಲಪೇಟ್‍ನ ಪೊಲೀಸ್ ಆರೋಗ್ಯ ಕೇಂದ್ರಕ್ಕೆ ಬಂದಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ ಅವರು ಕೋವಿಶೀಲ್ಡ್ ಲಸಿಕೆ ನೀಡಿದರು.

ಕೋವಿಶೀಲ್ಡ್ ಲಸಿಕೆ ಅತ್ಯಂತ ಸುರಕ್ಷಿತವಾಗಿದೆ. ಲಸಿಕೆ ಬಗ್ಗೆ ಯಾರೂ ಅನಗತ್ಯ ಭಯ ಪಡಬಾರದು. ಈಗಾಗಲೇ ಗುರುತಿಸಲಾದ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಲಸಿಕೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಮೊದಲ ಹಂತದಲ್ಲಿ ಗುರುತಿಸಲಾದ ಇಲಾಖೆಗಳ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಡಾ. ವಿ.ಜಿ. ರೆಡ್ಡಿ ಮಾಹಿತಿ ನೀಡಿದರು.

ಆರಂಭದಲ್ಲಿ ಕೇಂದ್ರದ ಸಿಬ್ಬಂದಿ ಜಿಲ್ಲಾಧಿಕಾರಿ ಅವರ ಮೊಬೈಲ್ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿ ಪಡೆದರು.

ತಾಲ್ಲೂಕು ಆರೋಗ್ಯಾಧಿಕಾರಿ ಲಕ್ಷ್ಮಣ ಜಾಧವ್, ಪೊಲೀಸ್ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅನಿಲಕುಮಾರ ಚತುರೆ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಓಂಕಾರ ಮಲ್ಲಿಗೆ ಇದ್ದರು.

ಮೀಸಲು ಪೊಲೀಸ್ ಸಿಬ್ಬಂದಿಗೆ ಕೋವಿಡ್ ಲಸಿಕೆ:
ಬೀದರ್:
ರಾಜ್ಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿಗೆ ಇಲ್ಲಿಯ ನೂರು ಹಾಸಿಗೆಗಳ ಆಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ನೀಡಲಾಯಿತು.

ಲಸಿಕೆ ಸಂಪೂರ್ಣ ಸುರಕ್ಷಿತವಾಗಿದೆ. ಹೀಗಾಗಿ ಎಲ್ಲರೂ ಲಸಿಕೆ ಪಡೆಯಬೇಕು ಎಂದು ತಿಳಿವಳಿಕೆ ಕೊಡಲಾಯಿತು.
ರಾಜ್ಯ ಮೀಸಲು ಪೊಲೀಸ್ ಪಡೆಯ ಡಿವೈಎಸ್‍ಪಿ ಎ.ಬಿ. ಮೇಘಣ್ಣವರ್, ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಮಹೇಶ ಅಡ್ಡೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು