ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಡಗಾಂವ್: ಜಿಲ್ಲಾಧಿಕಾರಿ, ಸಚಿವ ಭೇಟಿ

21 ರಂದು ಕಂದಾಯ ಸಚಿವ ಆರ್. ಅಶೋಕ ಗ್ರಾಮ ವಾಸ್ತವ್ಯ, ಸ್ಥಳ ಪರಿಶೀಲನೆ
Last Updated 14 ಮೇ 2022, 2:24 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಔರಾದ್: ಕಂದಾಯ ಸಚಿವ ಆರ್.ಅಶೋಕ 21ರಂದು ತಾಲ್ಲೂಕಿನ ವಡಗಾಂವ್ (ಡಿ) ಗ್ರಾಮದಲ್ಲಿ ವಾಸ್ತವ್ಯ ಮಾಡಲಿರುವ ಹಿನ್ನೆಲೆ ಶುಕ್ರವಾರ ಸಂಜೆ ಪಶು ಸಂಗೋಪನೆ ಸಚಿವ ಪ್ರಭು ಚವಾಣ್, ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಭೇಟಿ ನೀಡಿ ಪರಿಶೀಲಿಸಿದರು.

ಗ್ರಾಮದಲ್ಲಿ ಇಂದು 2ನೇ ಬಾರಿ ಸಭೆ ನಡೆಸಿದ ಸಚಿವರು, ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ನಿಗದಿಯಾಗಿದೆ ಎಂದರು.

ಜನರಿಂದ ಕಂದಾಯ ಇಲಾಖೆಗೆ ಸಂಬಂಧಿಸಿದ ಕೆಲಸಗಳಿಗಾಗಿ ಸಾಕಷ್ಟು ಕರೆಗಳು ಬರುತ್ತವೆ. ಕಂದಾಯ ಸಚಿವರ ಗ್ರಾಮ ವಾಸ್ತವ್ಯದಿಂದಾಗಿ ಸಚಿವರೇ ಖುದ್ದಾಗಿ ಜನರ ಸಮಸ್ಯೆಗಳನ್ನು ಆಲಿಸುವುದರಿಂದ ಗ್ರಾಮಕ್ಕೆ ಸಾಕಷ್ಟು ಲಾಭದಾಯಕವಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಕಂದಾಯ ಸಚಿವರ ಗ್ರಾಮ ವಾಸ್ತವ್ಯದ ಸ್ಥಳದಲ್ಲಿ ಕೃಷಿ, ತೋಟಗಾರಿಗೆ ಸೇರಿದಂತೆ ಎಲ್ಲ ಇಲಾಖೆಗಳ ಸ್ಟಾಲ್‌ಗಳನ್ನು ನಿರ್ಮಿಸಿ ಯೋಜನೆಗಳ ಬಗ್ಗೆ ತಿಳಿಹೇಳುವ ಕೆಲಸವಾಗಬೇಕು. ಜನರು ಸುಲಭವಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅಗತ್ಯ ವ್ಯವಸ್ಥೆಯನ್ನು ಮಾಡಬೇಕು ಎಂದು ತಿಳಿಸಿದರು.

ಅಂದು ಕಂದಾಯ ಸಚಿವರು ಗ್ರಾಮದಲ್ಲಿ ಬಸವೇಶ್ವರ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ವ್ಯವಸ್ಥೆ ಆಗಬೇಕು. ಕಳಸ ಹೊತ್ತ ಮಹಿಳೆಯರೊಂದಿಗೆ ಭವ್ಯ ಮೆರವಣಿಗೆ ನಡೆಯಲಿದೆ. ಕೋಲಾಟ, ಡೊಳ್ಳು ಕುಣಿತ, ಕಲಾ ತಂಡಗಳು ಇರಲಿವೆ. ಬಳಿಕ ಕಂದಾಯ ಸಚಿವರು ವೇದಿಕೆಗೆ ಆಗಮಿಸುವರು. ರಾತ್ರಿ ಬಿಸಿಎಂ ವಸತಿ ನಿಲಯದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಜಿ.ಪಂ ಸಿಇಒ ಜಹೀರಾ ನಸೀಮ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ತ್ರಿಶುಲಾಬಾಯಿ, ಸಹಾಯಕ ಆಯುಕ್ತ ಮಹಮ್ಮದ ನಯೀಮ್ ಮೋಮಿನ್, ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ, ತಾ.ಪಂ ಇಒ ಬೀರೆಂದ್ರಸಿಂಗ್ ಠಾಕೂರ್, ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಬಂಡೆಪ ಕಂಟೆ, ಪಶು ವಿವಿ ಆಡಳಿತ ಮಂಡಳಿ ಸದಸ್ಯ ವಸಂತ ವಕೀಲ್, ರಾಮಶೆಟ್ಟಿ ಪನ್ನಾಳೆ, ಮಲ್ಲಪ್ಪಾ ನೇಳಗೆ, ಪ್ರಕಾಶ ಮೇತ್ರೆ, ಪ್ರಕಾಶ ಜೀರ್ಗೆ, ಸಂಜುರಾಠೋಡ್
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT