ಬುಧವಾರ, ಡಿಸೆಂಬರ್ 8, 2021
18 °C

ಬೀದರ್: 30 ರಂದು ಡಿಸಿಸಿ ಬ್ಯಾಂಕ್ ಮಹಾಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಡಿಸಿಸಿ ಬ್ಯಾಂಕ್‍ನ 99ನೇ ವಾರ್ಷಿಕ ಮಹಾಸಭೆ ಅಕ್ಟೋಬರ್ 30 ರಂದು ಮಧ್ಯಾಹ್ನ 12.05ಕ್ಕೆ ನಗರದ ಬ್ಯಾಂಕ್ ಕೇಂದ್ರ ಕಚೇರಿಯ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ತಿಳಿಸಿದ್ದಾರೆ. ಸದಸ್ಯರು ಮಹಾಸಭೆಯಲ್ಲಿ ತಪ್ಪದೆ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

* * *

ಆರೂ ಕ್ಷೇತ್ರಗಳಲ್ಲಿ ವಿಜಯ ಪತಾಕೆ ಹಾರಿಸಿ

ಬೀದರ್: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಆರೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಹೇಳಿದರು.
ನಗರದ ಶಿವನಗರದಲ್ಲಿ ಇರುವ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಮತ್ತೊಮ್ಮೆ ಬಜೆಪಿ ಅಧಿಕಾರಕ್ಕೆ ಬರಬೇಕು. ಹೀಗಾಗಿ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಕೆಎಸ್‍ಎಂಡಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ಪ್ರಧಾನ ಕಾರ್ಯದರ್ಶಿ ಅಶೋಕ ಹೊಕ್ರಾಣೆ ಮೊದಲಾದವರು ಇದ್ದರು.

* * *

ಬಿಜೆಪಿ ಕೈಗಾರಿಕಾ ಪ್ರಕೋಷ್ಠಕ್ಕೆ ನೇಮಕ

ಬೀದರ್: ಬಿಜೆಪಿ ಜಿಲ್ಲಾ ಕೈಗಾರಿಕಾ ಪ್ರಕೋಷ್ಠಕ್ಕೆ ಏಳು ಜನ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ಪ್ರಕೋಷ್ಠದ ಜಿಲ್ಲಾ ಸಂಚಾಲಕ ಜಗದೀಶ ಖೂಬಾ ತಿಳಿಸಿದ್ದಾರೆ.‌

ಭೀಮಾಶಂಕರ(ಗಿರೀಶ್) ತುಂಬಾ, ಸತೀಶ ಸುಧಾಕರರಾವ್ ಗಾದಗೆ, ವೀರಶೆಟ್ಟಿ ಪಟ್ನೆ, ಸಂಗೀತಾ ರಮೇಶ ಉಪ್ಪಿನ್, ಪ್ರಕಾಶ ಮಾರುತಿ ಆಲೂರೆ, ವಿಜಯಕುಮಾರ ಪಾಟೀಲ ಹಾಗೂ ದಯಾನಂದ ಶಿರೋಮಣಿ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಹೇಳಿದ್ದಾರೆ.

ಸದಸ್ಯರು ಕೂಡಲೇ ಪಕ್ಷದ ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.