ಶುಕ್ರವಾರ, ಮಾರ್ಚ್ 31, 2023
32 °C
ಬ್ಯಾಂಕ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮ: ಉಮಾಕಾಂತ ನಾಗಮಾರಪಳ್ಳಿ ಹೇಳಿಕೆ

ಬೀದರ್: ಪ್ರತಿ ಕುಟುಂಬ ತಲುಪಿದ ಡಿಸಿಸಿ ಬ್ಯಾಂಕ್ -ಉಮಾಕಾಂತ ನಾಗಮಾರಪಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ರೈತರು, ಮಹಿಳೆಯರಿಗೆ ಸಾಲ ಸೌಲಭ್ಯ ಕಲ್ಪಿಸುವ ಮೂಲಕ ಜಿಲ್ಲೆಯ ಪ್ರತಿ ಕುಟುಂಬವನ್ನೂ ತಲುಪಿದೆ ಎಂದು ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಹೇಳಿದರು.

ನಗರದ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ಬ್ಯಾಂಕ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬ್ಯಾಂಕ್ ಜಿಲ್ಲೆಯ 3.25 ಲಕ್ಷ ರೈತರು, 4.17 ಲಕ್ಷ ಮಹಿಳೆಯರಿಗೆ ಸಾಲ ಒದಗಿಸಿದೆ. ಜನರ ಆರ್ಥಿಕ ಅಭಿವೃದ್ಧಿಯಲ್ಲಿ ಪಾಲುದಾರ ಆಗಿದೆ ಎಂದು ತಿಳಿಸಿದರು.

ಬ್ಯಾಂಕ್‍ಗಳು ಸಾಲ ನೀಡಿಕೆಗಷ್ಟೇ ಸೀಮಿತವಾಗಬಾರದು. ಸಾಲ ವಸೂಲಾತಿ ಸಹ ಮಾಡಬೇಕು. ಸಿಬ್ಬಂದಿ ಅತ್ಯುತ್ತಮ ಸೇವೆ ಮೂಲಕ ಅವುಗಳ ಅಭಿವೃದ್ಧಿಗೆ ಕಾರಣರಾಗಬೇಕು ಎಂದು ಸಲಹೆ ಮಾಡಿದರು.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಿರುವ ಕಾರಣ ಸಿಬ್ಬಂದಿ ಹೆಚ್ಚು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕಾದ ಅಗತ್ಯ ಇದೆ ಎಂದು ತಿಳಿಸಿದರು.

ಡಿಸಿಸಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಚನ್ನಬಸಯ್ಯ ಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಮಹಾಜನ, ಪ್ರಧಾನ ವ್ಯವಸ್ಥಾಪಕ ವಿಠ್ಠಲರೆಡ್ಡಿ ಪಿ. ಯಡಮಲ್ಲೆ, ಉಪ ಪ್ರಧಾನ ವ್ಯವಸ್ಥಾಪಕರಾದ ರಾಜಕುಮಾರ ಆಣದೂರೆ, ಅನಿಲ್ ಪಾಟೀಲ, ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿವೃತ್ತ ಹಿರಿಯ ಪ್ರಬಂಧಕ ಮಂಜುನಾಥ ಭಾಗವತ್ ಇದ್ದರು.

ಸಹಾರ್ದ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಅನಿಲ್ ಪಿ ಮತ್ತು ಮಹಾಲಿಂಗ ನಿರೂಪಿಸಿದರು. ಎಸ್.ಜಿ ಪಾಟೀಲ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು