ಗುರುವಾರ , ಸೆಪ್ಟೆಂಬರ್ 23, 2021
24 °C

ಹಾವು ಕಚ್ಚಿ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಮಲನಗರ: ಹಾವು ಕಚ್ಚಿದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕಮಲನಗರ ತಾಲ್ಲೂಕಿನ ಡಿಗ್ಗಿ ಗ್ರಾಮದಲ್ಲಿ ಜರುಗಿದೆ.

ಧನರಾಜ ಸೂರ್ಯಕಾಂತ ಶೇಟಕಾರ(31) ಮೃತಪಟ್ಟ ವ್ಯಕ್ತಿ. ಈತ ಬೀದರ್‌ನಲ್ಲಿ ವಾಚ್‌ಮ್ಯಾನ್ ಕೆಲಸ ಮಾಡುತ್ತಿದ್ದನು.

ಬೀದರ್‌ನ ಖಾಸಗಿ ಮನೆ ಯೊಂದರಲ್ಲಿ ಕೆಲಸ ನಿರ್ವಹಿಸುತ್ತಿರುವ ಸ್ಥಳದಲ್ಲಿ ಮಲಗಿದ್ದ ಸಮಯದಲ್ಲಿ ಹಾವು ಕಚ್ಚಿದೆ ಎಂದು ಕುಟುಂಬ ಮೂಲದಿಂದ ತಿಳಿದು ಬಂದಿದೆ.

ಶುಕ್ರವಾರ ಸ್ವಗ್ರಾಮ ಡಿಗ್ಗಿಯ ಸಾರ್ವಜನಿಕ ರುದ್ರಭೂಮಿಯಲ್ಲಿ ಸಂಜೆ ಅಂತ್ಯ ಸಂಸ್ಕಾರ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು