ಔರಾದ್: ತಾಲ್ಲೂಕಿನ ಮುಸ್ತಾಪುರ ಗ್ರಾಮದ ರೈತ ಉಮೇಶ ಹುಲ್ಲೆಪ್ಪ (45) ಶನಿವಾರ ಬೆಳಿಗ್ಗೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಸಹಾಯದಿಂದ ಮೃತದೇಹ ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳಿಸಿದರು.

ಮೃತ ರೈತನಿಗೆ ಹೆಂಡತಿ, ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗ ಇದ್ದಾನೆ. ಲಾಧಾ ಪಿಕೆಪಿಎಸ್‌ನಿಂದ ₹1 ಲಕ್ಷ ಹಾಗೂ ಖಾಸಗಿ ಬ್ಯಾಂಕನಿಂದ ₹2 ಲಕ್ಷ ಸಾಲ ಮಾಡಿದ್ದರು. ಸಾಲದ ಹೊರೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಮೃತರ ಹೆಂಡತಿ ಜಗದೇವಿ ನೀಡಿದ ದೂರಿನ ಮೇರೆಗೆ ಸಂತಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.