ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸೆಂಬರ್‌ ಕೊನೆಯ ವಾರದಲ್ಲಿ ಬೀದರ್‌ ಉತ್ಸವ

Last Updated 19 ಅಕ್ಟೋಬರ್ 2018, 19:47 IST
ಅಕ್ಷರ ಗಾತ್ರ

ಬೀದರ್: ‘ನಾಡಿನ ಪರಂಪರೆ ಹಾಗೂ ಸಂಸ್ಕೃತಿಯನ್ನು ಪರಿಚಯಿಸುವ ಬೀದರ್‌ ಉತ್ಸವವನ್ನು ಡಿಸೆಂಬರ್‌ ಕೊನೆಯ ವಾರದಲ್ಲಿ ನಡೆಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದರು.

ಶ್ರೀ ರಾಮ ಲೀಲಾ ಉತ್ಸವ ಸಮಿತಿಯ ವತಿಯಿಂದ ವಿಜಯದಶಮಿ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ರಾವಣನ ಪ್ರತಿಕೃತಿ ದಹನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಉತ್ಸವದ ಸಿದ್ಧತೆ ಆರಂಭಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಕಾರಣಾಂತರಗಳಿಂದ ನಿಂತು ಹೋಗಿರುವ ಬೀದರ್‌ ಉತ್ಸವ ಮತ್ತೆ ಆರಂಭವಾಗಲಿದೆ’ ಎಂದು ತಿಳಿಸಿದರು.

ಸಂಸದ ಭಗವಂತ ಖೂಬಾ, ವಿಧಾನ ಪರಿಷತ್ ಸದಸ್ಯ ರಘುನಾಥ ಮಲ್ಕಾಪುರೆ ಮಾತನಾಡಿದರು. ನಗರಸಭೆ ಅಧ್ಯಕ್ಷೆ ಶಾಲಿನಿ ಚಿಂತಾಮಣಿ, ಜಿಲ್ಲಾಧಿಕಾರಿ ಎಚ್‌.ಆರ್. ಮಹಾದೇವ, ರಾಮ ಲೀಲಾ ಉತ್ಸವ ಸಮಿತಿಯ ಸಂಸ್ಥಾಪಕ ಕಿರಣಸಿಂಗ್‌ ಠಾಕೂರ್‌, ಅಧ್ಯಕ್ಷ ಚಂದ್ರಶೇಖರ ಗಾದಾ, ಶೈಲೇಂದ್ರ ಬೆಲ್ದಾಳ್, ರಮೇಶ ಕುಲಕರ್ಣಿ, ಗುರುನಾಥ ಕೊಳ್ಳೂರ, ಲಕ್ಷ್ಮಣ ಕೊಟ್ಟರಗಿ, ಅಶೋಕ ರೇಜಂತಲ್, ರಾಜಕುಮಾರ ಅಗರವಾಲ್, ಪಿ.ಜನಾರ್ಧನ್, ನಿಲೇಶ ರಕ್ಷಾಳ ಹಾಗೂ ಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT