ಶುಕ್ರವಾರ, ಮೇ 27, 2022
21 °C
ಬಿ.ಎಸ್. ಯಡಿಯೂರಪ್ಪ ಬಡಾವಣೆ ನಿವೇಶನ ಹಂಚಿಕೆ

ಬಿ.ಎಸ್. ಯಡಿಯೂರಪ್ಪ ಬಡಾವಣೆ: ಅರ್ಜಿದಾರರ ಪಟ್ಟಿ ಪ್ರಕಟಿಸಲು ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ತಾಲ್ಲೂಕಿನ ಗೋರನಳ್ಳಿ(ಬಿ) ಗ್ರಾಮದ ಬಿ.ಎಸ್. ಯಡಿಯೂರಪ್ಪ ಬಡಾವಣೆಯಲ್ಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದವರ ಪಟ್ಟಿ ಪ್ರಕಟಿಸಲು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ.

ನಗರದ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಬಿ.ಎಸ್. ಯಡಿಯೂರಪ್ಪ ಬಡಾವಣೆಯಲ್ಲಿ ವಿವಿಧ ಅಳತೆಯ 188 ನಿವೇಶನಗಳಿಗೆ ಸಾರ್ವಜನಿಕರಿಂದ 384 ಅರ್ಜಿಗಳು ಸ್ವೀಕೃತವಾಗಿವೆ. ಅರ್ಜಿದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಯಿತು.

ಶಾಸಕ ರಹೀಂಖಾನ್, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪೂರೆ, ಅರವಿಂದಕುಮಾರ ಅರಳಿ, ಆಯುಕ್ತ ಅಭಯಕುಮಾರ, ಡಿವೈಎಸ್‍ಪಿ ಸತೀಶಕುಮಾರ, ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ರಮೇಶ ಪಾಟೀಲ ಮೊದಲಾದವರು ಇದ್ದರು.

ಸಭೆಯ ನಂತರ ಬಿಡಿಎ ಅಧ್ಯಕ್ಷ ಬಾಬುವಾಲಿ, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪೂರೆ, ಅರವಿಂದಕುಮಾರ ಅರಳಿ, ಪ್ರಾಧಿಕಾರದ ಆಯುಕ್ತ ಅಭಯಕುಮಾರ, ನಗರ ಯೋಜನಾ ವ್ಯವಸ್ಥಾಪಕ ವಿಷ್ಣು ಭಂಡಾರಿ ಅವರು ಬಿ.ಎಸ್. ಯಡಿಯೂರಪ್ಪ ಬಡಾವಣೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.