ಬಸವಕಲ್ಯಾಣ: ಭಾಲ್ಕಿ ತಾಲ್ಲೂಕಿನ ದಾಡಗಿ ಕ್ರಾಸ್ ನಲ್ಲಿನ ಬಸವಣ್ಣನವರ ಪ್ರತಿಮೆ ವಿರೂಪಗೊಳಿಸಿರುವುದನ್ನು ಖಂಡಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಗುರುವಾರ ಬಸವೇಶ್ವರ ದೇವಸ್ಥಾನ ಸಮಿತಿ ಮತ್ತು ವಿಶ್ವಸ್ಥ ಸಮಿತಿ, ರಾಷ್ಟ್ರೀಯ ಬಸವದಳ, ಬಸವತತ್ವ ಪ್ರಸಾರ ಕೇಂದ್ರ ಮತ್ತು ಅಕ್ಕನ ಬಳಗದಿಂದ ಪ್ರತಿಭಟನೆ ನಡೆಸಲಾಯಿತು.

ಬಳಿಕ ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿ ತಹಶೀಲ್ದಾರ್ ದತ್ತಾತ್ರಿ ಗಾದಾ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.

ಶಾಸಕ ಶರಣು ಸಲಗರ ಮಾತನಾಡಿ, ‘ಬಸವಣ್ಣನವರು ಸಮಾನತೆ, ಸಹೋದರತ್ವದ ಸಂದೇಶ ನೀಡಿದ್ದಾರೆ. ಆದ್ದರಿಂದ ಶಾಂತಿಯುತವಾಗಿ ಹೋರಾಟ ನಡೆಸಲಾಗುತ್ತಿದೆ. ಅಂಥ ಗುರುವಿನ ಪ್ರತಿಮೆಗೆ ಹಾನಿ ಮಾಡುವುದೆಂದರೆ ಮಾನವೀಯತೆಗೆ ಅವಮಾನ ಮಾಡಿದಂತೆ. ಒಂದು ವೇಳೆ ಪ್ರತಿಮೆ ವಿರೂಪಗೊಳಿಸಿದ ಆರೋಪಿಗಳನ್ನು ಬಂಧಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು.

ವಿಧಾನಪರಿಷತ್ ಮಾಜಿ ಸದಸ್ಯ ವಿಜಯಸಿಂಗ್, ಬಸವ ಮಹಾಮನೆಯ ಸಿದ್ದರಾಮೇಶ್ವರ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ರಾಷ್ಟ್ರೀಯ ಬಸವದಳದ ತಾಲ್ಲೂಕು ಘಟಕದ ಅಧ್ಯಕ್ಷ ರವೀಂದ್ರ ಕೊಳಕೂರ, ಪ್ರಮುಖರಾದ ಶಿವಕುಮಾರ ಶೆಟಗಾರ್, ಸಿದ್ದು ಬಿರಾದಾರ, ಶಂಕರ ಕರ್ಣೆ, ಶಿವಕುಮಾರ ಬಿರಾದಾರ, ವಿಜಯಲಕ್ಷ್ಮಿ ಗಡ್ಡೆ, ಗಣಪತಿ ಕಾಸ್ತೆ, ಶ್ರೀಶೈಲ್ ಹುಡೇದ್ ಮಾತನಾಡಿದರು.

ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಬಸವರಾಜ ಕೋರಕೆ, ವಿಶ್ವಸ್ಥ ಸಮಿತಿ ಅಧ್ಯಕ್ಷ ಶಶಿಕಾಂತ ದುರ್ಗೆ, ಮಲ್ಲಿಕಾರ್ಜುನ ಚಿರಡೆ, ಶ್ರೀಕಾಂತ ಬಡದಾಳೆ, ವಿವೇಕಾನಂದ ಹೊದಲೂರೆ, ಅನಿಲಕುಮಾರ ರಗಟೆ, ಸೋಮಶೇಖರ ವಸ್ತ್ರದ್, ಸೂರ್ಯಕಾಂತ ಚಿಲ್ಲಾಬಟ್ಟೆ, ಬಸವರಾಜ ಬಾಲಿಕಿಲೆ, ಜಗನ್ನಾಥ ಪಾಟೀಲ, ಅಶೋಕ ನಾಗರಾಳೆ, ಡಾ.ಪೃಥ್ವಿರಾಜ ಬಿರಾದಾರ, .ಜಿ.ಎಸ್.ಭುರಳೆ, ರಾಜಕುಮಾರ ಹೊಳಕುಂದೆ, ಕಾಶಪ್ಪ ಸಕ್ಕರಬಾವಿ, ಜಗನ್ನಾಥ ಖೂಬಾ, ರೇವಣಪ್ಪ ರಾಯವಾಡೆ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.