ಸೋಮವಾರ, ಏಪ್ರಿಲ್ 19, 2021
32 °C

‘ರಾಷ್ಟ್ರೀಯ ಪಕ್ಷಗಳನ್ನು ಸೋಲಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ: ‘ರಾಷ್ಟ್ರೀಯ ಪಕ್ಷಗಳು ಸೋಲುಂಡು ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬಂದಾಗ ಮಾತ್ರ ರಾಜ್ಯಕ್ಕೆ ಒಳ್ಳೆಯದಾಗಲು ಸಾಧ್ಯ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಖಾಶೆಂಪೂರ್ ತಿಳಿಸಿದರು.

ಬಸವಕಲ್ಯಾಣ, ಹತ್ಯಾಳ, ಹಾರ ಕೂಡ, ಸಿರಗಾಪೂರ, ಗದಲೇಗಾಂವ್, ಮೈಸಲಗಾ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು.

‘ರಾಜ್ಯದಿಂದ ಆಯ್ಕೆಯಾದ ಎಲ್ಲ ಬಿಜೆಪಿ ಸಂಸದರು ರಾಜ್ಯದ ಪರವಾಗಿ ಕೇಂದ್ರದಲ್ಲಿ ಧ್ವನಿ ಎತ್ತಿಲ್ಲ. ಬಸವಕಲ್ಯಾಣದಲ್ಲಿ ಸೈಯದ್‌, ಬೀದರ್‌ನಲ್ಲಿ ಬಂಡೆಪ್ಪ ಖಾಶೆಂಪೂರ್, ಬೆಂಗಳೂರಿನಲ್ಲಿ ಕುಮಾರಣ್ಣ ನಾವು ಯಾವಾಗಲೂ ನಿಮ್ಮ ಕೆಲಸ ಮಾಡಲು ತಯಾರಿದ್ದೇವೆ’ ಎಂದರು.

ಜೆಡಿಎಸ್ ಜಿಲ್ಲಾ ಅಧ್ಯಕ್ಷ ರಮೇಶ್ ಪಾಟೀಲ ಸೋಲಪುರ, ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.