ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಯುವಕರ ಉಜ್ವಲ ಭವಿಷ್ಯಕ್ಕೆ ‘ಯುವನಿಧಿ’- ಗೋವಿಂದ ರೆಡ್ಡಿ

Published 7 ಜನವರಿ 2024, 7:48 IST
Last Updated 7 ಜನವರಿ 2024, 7:48 IST
ಅಕ್ಷರ ಗಾತ್ರ

ಬೀದರ್‌: ‘ಯುವಕರ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ‘ಯುವನಿಧಿ’ ಯೋಜನೆ ಜಾರಿಗೆ ತಂದಿದ್ದು, ವಿದ್ಯಾರ್ಥಿಗಳು ಯೋಜನೆಯಡಿ ಹೆಸರು ನೋಂದಣಿ ಮಾಡಿಸಿಕೊಂಡು ಅದರ ಪ್ರಯೋಜನ ಪಡೆಯಬೇಕು’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜಿಲ್ಲೆಯ ಪದವಿ ಹಾಗೂ ಡಿಪ್ಲೊಮಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಇತರೆ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್‌ ನಡೆಸಿ ಮಾತನಾಡಿದರು. 

2023ರಲ್ಲಿ ಪದವಿ ಹಾಗೂ ಡಿಪ್ಲೊಮಾದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಯುವನಿಧಿ ಯೋಜನೆ ಲಾಭ ಪಡೆಯಬಹುದು. ಅಭ್ಯರ್ಥಿಗಳು ಅವರ ಹೆಸರನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಬೇಕು. ಆಯಾ ಕಾಲೇಜುಗಳ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕೆಂದು ಸೂಚಿಸಿದರು.

ವಿದ್ಯಾರ್ಥಿಗಳು ಪದವಿ, ಡಿಪ್ಲೊಮಾ ನಂತರ ಕನಿಷ್ಠ 6 ತಿಂಗಳ ವರೆಗೆ ಸರ್ಕಾರಿ ಅಥವಾ ಖಾಸಗಿ ಸ್ಥಳದಲ್ಲಿ ಉದ್ಯೋಗ ಮಾಡಿರಬಾರದು. ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದವರು ಯುವನಿಧಿ ಅಡಿ ನೋಂದಣಿ ಮಾಡಿಸಬಹುದು. ಉಚಿತವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ಪೋರ್ಟಲ್‌ನಲ್ಲಿ ಮಾಸಿಕವಾಗಿ ನಿರುದ್ಯೋಗ ದೃಢೀಕರಣ ಕಡ್ಡಾಯ. ತಪ್ಪು ಮಾಹಿತಿ ನೀಡಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ದಂಡ ವಿಧಿಸಲಾಗುತ್ತದೆ ಎಂದು ಹೇಳಿದರು.

ಪ್ರತಿ ತಿಂಗಳು ಪದವಿಧರರಿಗೆ ₹3 ಸಾವಿರ, ಡಿಪ್ಲೊಮಾ ಪದವಿಧರರಿಗೆ ₹1,500  ನೀಡಲಾಗುವುದು. ಈಗಾಗಲೇ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಲವೀಶ್ ಓರ್ಡಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಬಸವರಾಜ, ಪದವಿ ಹಾಗೂ ಡಿಪ್ಲೊಮಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ವಿವಿಧ ತಾಲ್ಲೂಕಿನ ತಹಶೀಲ್ದಾರರು ಪಾಲ್ಗೊಂಡಿದ್ದರು.

ಪದವಿ, ಡಿಪ್ಲೊಮಾ ಪದವಿಧರರು ಅರ್ಹ ತಪ್ಪು ಮಾಹಿತಿ ಕೊಟ್ಟವರಿಗೆ ದಂಡ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT