ದೆಹಲಿ ಮಾದರಿಯಲ್ಲಿ ಸರ್ಕಾರಿ ಶಾಲೆ ಅಭಿವೃದ್ಧಿ: ಸಚಿವ ಬಂಡೆಪ್ಪ ಕಾಶೆಂಪೂರ

7

ದೆಹಲಿ ಮಾದರಿಯಲ್ಲಿ ಸರ್ಕಾರಿ ಶಾಲೆ ಅಭಿವೃದ್ಧಿ: ಸಚಿವ ಬಂಡೆಪ್ಪ ಕಾಶೆಂಪೂರ

Published:
Updated:
Deccan Herald

ಬೀದರ್‌: ‘ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ದೆಹಲಿಯ ಸರ್ಕಾರಿ ಶಾಲೆಗಳ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ ತಿಳಿಸಿದರು.

‘ಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಲು ಈಚೆಗೆ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿನ ಸರ್ಕಾರಿ ಶಾಲೆಗಳನ್ನು ನೋಡಿ ಬಂದಿದ್ದೇನೆ. ಶಾಲೆಗಳನ್ನು ಬಹಳ ಉತ್ತಮವಾಗಿ ಅಭಿವೃದ್ಧಿ ಪಡಿಸಲಾಗಿದ್ದು, ಖಾಸಗಿ ಶಾಲೆಯ ಮಕ್ಕಳೂ ಸರ್ಕಾರಿ ಶಾಲೆಗೆ ಬರುವಂತೆ ಮಾಡಿದ್ದಾರೆ. ಅದೇ ಮಾದರಿಯಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಲಾಗುವುದು’ ಎಂದು ನಗರದಲ್ಲಿ ಸೋಮವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.

‘ಸ್ಮಾರ್ಟ್‌ ಕ್ಲಾಸ್, ಕುಡಿಯುವ ನೀರು, ಶೌಚಾಲಯ, ಪೀಠೋಪಕರಣ, ಉತ್ತಮ ಬೋಧನೆ ಹೀಗೆ ಪ್ರತಿಯೊಂದು ಅಂಶವನ್ನು ಪರಿಗಣಿಸಲಾಗುವುದು. ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಎಚ್‌ಕೆಆರ್‌ಡಿಬಿ)ಯಲ್ಲಿ ಅನುದಾನದ ಕೊರತೆ ಇಲ್ಲ. ಪ್ರಸ್ತುತ ರಸ್ತೆಗಳ ಅಭಿವೃದ್ಧಿಗೆ ಒತ್ತು ಕೊಡಲಾಗಿದೆ. ಎಚ್‌ಕೆಆರ್‌ಡಿಬಿ ಸಭೆಯಲ್ಲಿ ಚರ್ಚಿಸಿ ಶಾಲೆಗಳ ಅಭಿವೃದ್ಧಿಗೆ ಅನುದಾನ ಬಳಸಿಕೊಳ್ಳಲು ಪ್ರಾಮುಖ್ಯ ನೀಡಲಾಗುವುದು’ ಎಂದು ತಿಳಿಸಿದರು.

‘ಬೀದರ್‌ ತಾಲ್ಲೂಕಿನ ಕಮಠಾಣ ಸರ್ಕಾರಿ ಪ್ರೌಢ ಶಾಲೆಯನ್ನು ದತ್ತು ಪಡೆಯಲಾಗುವುದು. ಒಂದೇ ಆವರಣದಲ್ಲಿ ಕನ್ನಡ ಹಾಗೂ ಉರ್ದು ಮಾಧ್ಯಮ ಶಾಲೆಗಳು ನಡೆಯುತ್ತಿದ್ದು, ಒಂದು ಸಾವಿರ ವಿದ್ಯಾರ್ಥಿಗಳು ಶಾಲೆಗಳಲ್ಲಿ ಓದುತ್ತಿದ್ದಾರೆ. ಹೀಗಾಗಿ ವಿಸ್ತೃತ ಯೋಜನಾ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದರು.

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !