ಸೋಮವಾರ, ಜುಲೈ 26, 2021
26 °C

ಕಲಾವಿದರಿಗೆ ಆಹಾರಧಾನ್ಯ ಕಿಟ್ ವಿತರಣೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 

ಬೀದರ್: ಕರ್ನಾಟಕ ಸಾಹಿತ್ಯ ಸಂಘ, ಕರ್ನಾಟಕ ಕಾಲೇಜಿನ ಕನ್ನಡ ಸಾಹಿತ್ಯ ವಿಭಾಗ, ಕರ್ನಾಟಕ ಬರಹಗಾರರ ಮತ್ತು ಕಲಾವಿದರ ಸಂಘ ಹಾಗೂ ಬೀದರ್ ಮಾನವತಾ ಫೌಂಡೇಶನ್ ವತಿಯಿಂದ ನಗರದ ಕರ್ನಾಟಕ ಸಾಹಿತ್ಯ ಸಂಘದ ಕಚೇರಿಯಲ್ಲಿ ಭಾನುವಾರ (ಜು.18) ಬೆಳಿಗ್ಗೆ 11ಕ್ಕೆ ಬಡ ಕಲಾವಿದರಿಗೆ ಆಹಾರಧಾನ್ಯ ಕಿಟ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ಕಿಟ್ ವಿತರಣೆ ಮಾಡುವರು. ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ರಜನಿಶ್ ವಾಲಿ, ನಿವೃತ್ತ ಪ್ರಾಚಾರ್ಯ ಬಸವರಾಜ ಸ್ವಾಮಿ ಹೆಡಗಾಪುರಕರ್, ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಜಗನ್ನಾಥ ಹೆಬ್ಬಾಳೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಅಗ್ನಿಶಾಮಕ ಇಲಾಖೆಯ ಮುಖ್ಯಮಂತ್ರಿ ಪದಕ ವಿಜೇತ ಮಹಾದೇವ ಮಾಳಗೆ ನಾವದಗೇರಿ ಅವರನ್ನು ಸನ್ಮಾನಿಸಲಾಗುವುದು. ಜಿಲ್ಲಾ ಅಭಿವೃದ್ಧಿ ವೇದಿಕೆ ಅಧ್ಯಕ್ಷ ಚನ್ನಬಸಪ್ಪ ಹಾಲಹಳ್ಳಿ ಅಧ್ಯಕ್ಷತೆ ವಹಿಸುವರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.