ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ವಸತಿ ನಿಲಯ ಮೇಲ್ವಿಚಾರಕಿ ವಜಾಕ್ಕೆ ಆಗ್ರಹ

Last Updated 5 ಸೆಪ್ಟೆಂಬರ್ 2022, 15:30 IST
ಅಕ್ಷರ ಗಾತ್ರ

ಬೀದರ್: ವಿದ್ಯಾರ್ಥಿನಿಯರಿಂದ ಶೌಚಾಲಯ, ಬಟ್ಟೆ ತೊಳೆಸಿದ ಔರಾದ್ ತಾಲ್ಲೂಕಿನ ಧೂಪತಮಹಾಗಾಂವ್ ಗ್ರಾಮದ ಕಸ್ತೂರಬಾ ಬಾಲಕಿಯರ ವಸತಿ ನಿಲಯದ ಮೇಲ್ವಿಚಾರಕಿಯನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಾಮಾಜಿಕ ನ್ಯಾಯಕ್ಕಾಗಿ) ಆಗ್ರಹಿಸಿದೆ.

ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ಅಧ್ಯಕ್ಷ ಸತೀಶ ವಗ್ಗೆ ಅವರ ನೇತೃತ್ವದಲ್ಲಿ ನಗರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಬರೆದ ಮನವಿ ಪತ್ರವನ್ನು ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ ಅವರಿಗೆ ಸಲ್ಲಿಸಿದರು.

ವಸತಿ ನಿಲಯ ಮೇಲ್ವಿಚಾರಕಿ ಜಗದೇವಿ ಮೇತ್ರೆ ಅವರು ತಮ್ಮ ಕೋಣೆ ಹಾಗೂ ಹಾಸಿಗೆಗಳನ್ನು ವಿದ್ಯಾರ್ಥಿನಿಯರಿಂದ ಸ್ವಚ್ಛಗೊಳಿಸುತ್ತಿದ್ದಾರೆ. ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ದೂರಿದರು.

ಮೇಲ್ವಿಚಾರಕಿ ಹಾಗೂ ಔರಾದ್ ಕ್ಷೇತ್ರ ಶಿಕ್ಷಣಾಧಿಕಾರಿ ಅವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು. ಇಲ್ಲವಾದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರಮುಖರಾದ ಸಾಯಿ ಸಿಂಧೆ, ಮೋಹನ ಡಾಂಗೆ, ಮುಕೇಶ ಶಹಾಗಂಜ್, ಸೂರ್ಯಕಾಂತ ಸಾಧುರೆ, ಗೌತಮ ಭೋಸ್ಲೆ, ರವಿ ಎಚ್, ಸುಂದರ ಹಾಲಹಿಪ್ಪರ್ಗಾ, ಸಾಗರ ಹಾಲಹಿಪ್ಪರ್ಗಾ, ಮಹೇಶ ಕೌಡಗಾಂವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT