ಭಾನುವಾರ, ಜನವರಿ 23, 2022
27 °C

ಸಮರ್ಪಕ ಬೆಲೆ ಘೋಷಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ಘೋಷಿಸುವಂತೆ ಆಗ್ರಹಿಸಿ ಮಂಗಳವಾರ ಭಾರತೀಯ ಕಿಸಾನ್‌ ಸಂಘದ ಪದಾಧಿಕಾರಿಗಳು ತಹಶೀಲ್ದಾರ್‌ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿ ಮನವಿ ಸಲ್ಲಿಸಿದರು.

ನಂತರ ಮಾತನಾಡಿದ ತಾಲ್ಲೂಕು ಅಧ್ಯಕ್ಷ ಪ್ರಭು ಮೂಲಗೆ, ರೈತರು ಕಷ್ಟಪಟ್ಟು ಬೆಳೆದ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ. ಇದರಿಂದ ಅನ್ನದಾತರು ಸಂಕಷ್ಟದಲ್ಲಿ ಹುಟ್ಟಿ ಸಂಕಷ್ಟದಲ್ಲಿಯೇ ಸಾಯುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರಿಗೆ ಉತ್ಪಾದನಾ ವೆಚ್ಚದ ಆಧಾರದ ಮೇಲೆ ಲಾಭದಾಯಕ ಬೆಲೆ ದೊರೆಯುವಂತಾಗಬೇಕು. ಅಂದಾಗ ಮಾತ್ರ ರೈತರ ಆರ್ಥಿಕ ಸ್ಥಿತಿ ಸುಧಾರಿಸಲು ಸಾಧ್ಯ. ಹಾಗಾಗಿ, ಕೇವಲ ಬೆಂಬಲ ಬೆಲೆ ಘೋಷಿಸಿ ಸುಮ್ಮನಾದರೆ ಸಾಲದು. ಹಣದುಬ್ಬರಕ್ಕೆ ಅನುಗುಣವಾಗಿ ಬೆಳೆಗಳ ದರ ನಿಗದಿಪಡಿಸಬೇಕು. ಘೋಷಿತ ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಮುಖರಾದ ಅಮಿತ್ ಪಾಟೀಲ, ಸುನಿಲ್‌ಕುಮಾರ್ ದೇಶಮುಖ್, ಬಸವರಾಜ್ ಪಾಟೀಲ. ರವಿ ಸಿರ್ಸಿ, ಪ್ರಶಾಂತ ಪಾಟೀಲ, ಧನರಾಜ್ ಪಾಟೀಲ, ದೇವಿದಾಸ ಜೋಶಿ, ಉದಯರಾಜ್ ಪಟ್ನೆ, ಮಹದೇವ, ಮೋಷಿನ್ ಖುರೇಶಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು