ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್: ಪಿಂಚಣಿ ವಂಚಿತ ನೌಕರರ ಸಂಘದಿಂದ ಪ್ರತಿಭಟನೆ

Published 17 ಆಗಸ್ಟ್ 2024, 15:45 IST
Last Updated 17 ಆಗಸ್ಟ್ 2024, 15:45 IST
ಅಕ್ಷರ ಗಾತ್ರ

ಬೀದರ್‌: ಹಳೆ ಪಿಂಚಣಿ ಯೋಜನೆ ಜಾರಿಗೆ ತರುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದವರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ವೇತನ, ನಿವೃತ್ತಿ ವೇತನ, ಸಿಬ್ಬಂದಿ ಕೊರತೆ ನೀಗಿಸಲು ಹುದ್ದೆಗಳಿಗೆ ಬಡ್ತಿ, ಎನ್‌ಪಿಎಸ್‌ ರದ್ದುಪಡಿಸಿ ಒಪಿಎಸ್ ಜಾರಿಗೆ ತರಬೇಕು. ಅನುದಾನಿತ ನೌಕರರಿಗೂ ಸರ್ಕಾರಿ ನೌಕರರಂತೆ ವೈದ್ಯಕೀಯ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದರು.

ಸರ್ಕಾರ ಆಡಳಿತಕ್ಕೆ ಬಂದು ವರ್ಷ ಕಳೆದರೂ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿರುವ ಒಂದು ಭರವಸೆಯೂ ಈಡೇರಿಸಿಲ್ಲ. ಒಂದುವೇಳೆ ಶಿಕ್ಷಕರ ದಿನಾಚರಣೆ (ಸೆ. 5ರ) ಒಳಗಾಗಿ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ರಾಜ್ಯ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ ಯರನಳ್ಳಿ ಎಚ್ಚರಿಸಿದರು.

ಕರ್ನಾಟಕ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಜಿಲ್ಲಾಧ್ಯಕ್ಷ ಅಂತಪ್ಪ ಬಿರಾದಾರ, ತಾಲ್ಲೂಕು ಅಧ್ಯಕ್ಷ ಶಿವಾಜಿ, ಅನುದಾನ ರಹಿತ ಶಾಲಾ ಕಾಲೇಜುಗಳ ಸಂಘದ ಜಿಲ್ಲಾ ಗೌರವ ಅಧ್ಯಕ್ಷ ರೇವಣಸಿದ್ದಪ್ಪ ಜಲಾದೆ, ಜಿಲ್ಲಾ ಅನುದಾನಿತ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಂಗಶೆಟ್ಟಿ ಹಲಬರ್ಗಾ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚೆನಶೆಟ್ಟಿ, ಪ್ರಶಾಂತ ರಾಗಾ, ಪರಮೇಶ್ವರ ಬಿರಾದಾರ, ಉಮೇಶ ಪಾಟೀಲ, ಲಕ್ಷ್ಮಣ ಪೂಜಾರಿ, ಶಿವಕುಮಾರ ವಾಲದೊಡ್ಡಿ, ಶಿವಕುಮಾರ ಬಿರಾದಾರ, ಜೆಟ್ಟೆಪ್ಪ ಪೂಜಾರಿ, ನಾಮದೇವ ಶರ್ಮಾ, ಪ್ರೌಢ ಶಾಲಾ ಮುಖ್ಯಶಿಕ್ಷಕರು ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT