ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಕರೆಗೆ ₹ 25 ಸಾವಿರ ಪರಿಹಾರಕ್ಕೆ ಆಗ್ರಹ

ಬೀದರ್ ಜಿಲ್ಲೆಯಲ್ಲಿ ಸತತ ಮಳೆಗೆ ಬೆಳೆ ಹಾನಿ
Last Updated 9 ಸೆಪ್ಟೆಂಬರ್ 2021, 14:09 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯಲ್ಲಿ ಸತತ ಮಳೆಯಿಂದ ಬೆಳೆ ಹಾನಿಗೀಡಾದ ರೈತರಿಗೆ ಪ್ರತಿ ಎಕರೆಗೆ ₹ 25 ಸಾವಿರ ಪರಿಹಾರ ಒದಗಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ)ಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಆಗ್ರಹಿಸಿದ್ದಾರೆ.

ವಾರದ ಅವಧಿಯಲ್ಲಿ ಸುರಿದ ಮಳೆಗೆ ಉದ್ದು, ಹೆಸರು, ಸೋಯಾಬೀನ್, ತೊಗರಿ, ಹತ್ತಿ, ಕಬ್ಬು ಬೆಳೆಗಳು ನೀರು ಪಾಲಾಗಿವೆ. ಸಾಲ ಮಾಡಿ ಬಿತ್ತನೆ ಮಾಡಿದ್ದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.

ಕೋವಿಡ್‍ನಿಂದ ತೊಂದರೆಯಲ್ಲಿ ಇರುವ ರೈತರು ಈ ಬಾರಿ ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದರು. ಆದರೆ, ನಿರಂತರ ಅವರ ಆಸೆಯನ್ನು ನುಚ್ಚುನೂರು ಮಾಡಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದು ತಿಳಿಸಿದ್ದಾರೆ.

ಮಳೆಯ ಆರ್ಭಟಕ್ಕೆ ಜಿಲ್ಲೆಯ ಗ್ರಾಮೀಣ ಪ್ರದೇಶದ ಅನೇಕ ರಸ್ತೆಗಳು ಕಿತ್ತುಕೊಂಡು ಹೋಗಿವೆ. ಸೇತುವೆಗಳು ಕುಸಿದಿವೆ. ಅನೇಕ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. 200ಕ್ಕೂ ಹೆಚ್ಚು ಮನೆಗಳು ಬಿದ್ದಿವೆ. ಜಿಲ್ಲೆಯಲ್ಲಿ ಆಸ್ತಿ ಪಾಸ್ತಿಗೆ ಅಪಾರ ಹಾನಿ ಉಂಟಾಗಿದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಕೂಡಲೇ ಜಿಲ್ಲೆಯನ್ನು ಅತಿವೃಷ್ಟಿ ಪೀಡಿತ ಪ್ರದೇಶ ಎಂದು ಘೋಷಿಸಬೇಕು. ಬೆಳೆ ಹಾನಿ, ಮನೆ ಕಳೆದುಕೊಂಡವರಿಗೆ ತಕ್ಷಣ ಪರಿಹಾರ ಕೊಡಬೇಕು. ಹಾಳಾದ ರಸ್ತೆ, ಸೇತುವೆಗಳ ದುರಸ್ತಿ ಕಾರ್ಯ ಯುದ್ಧೋಪಾದಿಯಲ್ಲಿ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ರೈತರು ಸಹಕಾರ ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಿಂದ ಪಡೆದ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಮುಂದಿನ ಕೃಷಿ ಚಟುವಟಿಕೆಗಾಗಿ ಹೊಸ ಸಾಲ ಮಂಜೂರು ಮಾಡಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT