ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ವಿಮಾನಯಾನ ಸೇವೆ ಪುನರಾರಂಭಕ್ಕೆ ಆಗ್ರಹ, ಪ್ರತಿಭಟನೆ

Published 16 ಮಾರ್ಚ್ 2024, 15:28 IST
Last Updated 16 ಮಾರ್ಚ್ 2024, 15:28 IST
ಅಕ್ಷರ ಗಾತ್ರ

ಬೀದರ್‌: ಬೀದರ್‌–ಬೆಂಗಳೂರು ವಿಮಾನಯಾನ ಸೇವೆ ಪುನರಾರಂಭಿಸಬೇಕು ಎಂದು ಆಗ್ರಹಿಸಿ ಭಾರತ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಬೀದರ್‌–ಬೆಂಗಳೂರು ವಿಮಾನಯಾನವು ಯಶಸ್ವಿಯಾಗಿ ನಡೆದಿತ್ತು. 2023ರಲ್ಲಿ ವಿಮಾನಯಾನ ಸಂಸ್ಥೆಯೊಂದಿಗಿನ ಒಪ್ಪಂದ ಕೊನೆಗೊಂಡ ಹಿನ್ನೆಲೆಯಲ್ಲಿ ಸೇವೆ ನಿಂತಿದೆ. ಮರು ಒಪ್ಪಂದ ಮಾಡಿಕೊಂಡು ತಕ್ಷಣವೇ ವಿಮಾನ ಸೇವೆ ಶುರು ಮಾಡಬೇಕೆಂದು ಒತ್ತಾಯಿಸಿದರು. ಈ ಸಂಬಂಧ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಗೌಡಪನೋರ, ಪ್ರದೀಪ ಯನಗುಂದಾ, ಅರುಣ ಕೋಡಗೆ, ಶ್ರೀನಿವಾಸ ಮಲ್ಬಾ, ಬಸವರಾಜ ಪಾಟೀಲ ಇನ್ನಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT