ಬುಧವಾರ, ಅಕ್ಟೋಬರ್ 21, 2020
21 °C

ರಸ್ತೆ ದುರಸ್ತಿಗೆ ವಾಣಿಜ್ಯ ಸಂಸ್ಥೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಹಾಳಾಗಿರುವ ನಗರದ ಪ್ರಮುಖ ರಸ್ತೆಗಳನ್ನು ಕೂಡಲೇ ದುರಸ್ತಿಪಡಿಸಬೇಕು ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಆಗ್ರಹಿಸಿದೆ.

ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ್ ಅವರು ಈ ಕುರಿತು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ರಸ್ತೆ ಮಧ್ಯೆ ಸೃಷ್ಟಿಯಾಗಿರುವ ತಗ್ಗು ಗುಂಡಿಗಳನ್ನು ಭರ್ತಿ ಮಾಡುವಂತೆ ಎರಡು ವರ್ಷಗಳಿಂದ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಉಪ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್, ನಗರಸಭೆ ಆಯುಕ್ತ, ಜಿಲ್ಲಾಧಿಕಾರಿ ಹಾಗೂ ಕಲಬುರ್ಗಿಯ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸುತ್ತ ಬರಲಾಗಿದೆ. ಆದರೆ, ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ.

ಪ್ರಸಕ್ತ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ರಸ್ತೆಗಳಲ್ಲಿ ನೀರು ನಿಂತುಕೊಂಡು ತಗ್ಗುಗಳು ಕಾಣಿಸದೆ ಅಪಘಾತಗಳು ಸಂಭವಿಸುತ್ತಿವೆ ಎಂದು ಹೇಳಿದ್ದಾರೆ.

ಸಂಬಂಧಪಟ್ಟವರು ಸಮಸ್ಯೆ ಬಗೆಹರಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಎಡೆಮಾಡಿಕೊಡುತ್ತಿದೆ. ಕರ ಪಾವತಿಸುವ ಸಾರ್ವಜನಿಕರು ಗ್ರಾಹಕರ ವೇದಿಕೆಯ ಕಟ್ಟೆ ಹತ್ತಿದರೂ ಅಚ್ಚರಿ ಇಲ್ಲ ಎಂದು ತಿಳಿಸಿದ್ದಾರೆ.

ಶೀಘ್ರ ರಸ್ತೆ ದುರಸ್ತಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.