ಮಂಗಳವಾರ, ನವೆಂಬರ್ 24, 2020
26 °C

ವಿದ್ಯುತ್ ದರ ಹೆಚ್ಚಳ ಹಿಂಪಡೆಯಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೊರೊನಾ ಪರಿಣಾಮ ಎಲ್ಲ ಕ್ಷೇತ್ರಗಳ ಮೇಲೂ ಆಗಿರುವ ಕಾರಣ ವಿದ್ಯುತ್ ದರ ಹೆಚ್ಚಳ ಕೂಡಲೇ ಹಿಂಪಡೆಯಬೇಕು ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ್ ಆಗ್ರಹಿಸಿದ್ದಾರೆ.

ಉತ್ಪಾದನೆಗೆ ಬೇಕಾಗುವ ಸಂಪನ್ಮೂಲಗಳ ಕೊರತೆ, ಉತ್ಪಾದಿತ ಸರಕುಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಇಲ್ಲದ ಹಾಗೂ ಬೆಲೆ ಏರಿಕೆಯ ಕಾರಣ ಕೈಗಾರಿಕೆಗಳ ಬೆಳವಣಿಗೆ ಕುಂಠಿತಗೊಂಡಿದೆ. ಹೀಗಾಗಿ ಕೈಗಾರಿಕೆಗಳ ಮಾಲೀಕರಿಗೆ ಸಿಬ್ಬಂದಿ ವೇತನ ಸಹ ಸರಿಯಾಗಿ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಹಲವು ಕೈಗಾರಿಕೆಗಳು ಬಾಗಿಲು ಮುಚ್ಚಿವೆ. ಕೊರೊನಾ ಭೀಕರತೆ ನಡುವೆಯೂ ಸರ್ಕಾರ ವಿದ್ಯುತ್ ದರ ಪರಿಷ್ಕರಣೆ ಮಾಡಿರುವುದು ಸರಿಯಲ್ಲ. ಇದು, ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಸರ್ಕಾರ ವಿದ್ಯುತ್ ಸರಬರಾಜಿನಲ್ಲಿ ಆಗುತ್ತಿರುವ ನಷ್ಟದ ತಡೆಗೆ ಕ್ರಮ ಕೈಗೊಳ್ಳಬೇಕು. ಔದ್ಯೋಗಿಕ ವಲಯಕ್ಕೆ ಗುಣಮಟ್ಟದ ವಿದ್ಯುತ್ ಪೂರೈಸಬೇಕು. ದರ ಹೆಚ್ಚಳ ವಾಪಸ್ ಪಡೆದು ಎಲ್ಲ ವಲಯ ಹಾಗೂ ವರ್ಗಗಳ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.