ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಆಗ್ರಹ

Published 13 ಡಿಸೆಂಬರ್ 2023, 15:56 IST
Last Updated 13 ಡಿಸೆಂಬರ್ 2023, 15:56 IST
ಅಕ್ಷರ ಗಾತ್ರ

ಬೀದರ್‌: ಸೇವೆ ಕಾಯಂಗೊಳಿಸಬೇಕೆಂದು ಅತಿಥಿ ಉಪನ್ಯಾಸಕರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದು, ಕೂಡಲೇ ಅವರ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಕ್ರಮ ಜರುಗಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್‌ಎಫ್‌ಐ) ಆಗ್ರಹಿಸಿದೆ.

ಈ ಸಂಬಂಧ ಫೆಡರೇಷನ್‌ ಪ್ರಮುಖರು ನಗರದಲ್ಲಿ ಬುಧವಾರ ಮುಖ್ಯಮಂತ್ರಿ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಸಲ್ಲಿಸಿ ಒತ್ತಾಯಿಸಿದರು.

ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ಕೋವಿಡ್‌ ನಂತರದ ವರ್ಷ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿತ್ತು. ಆದರೆ, ಈಗ ಪುನಃ ವಿದ್ಯಾರ್ಥಿಗಳು ಖಾಸಗಿ ಕಾಲೇಜುಗಳತ್ತ ಮುಖ ಮಾಡಿದ್ದಾರೆ. ಮತ್ತೆ ದಾಖಲಾತಿಯಲ್ಲಿ ಇಳಿಕೆಯಾಗಿದೆ. ಇಂತಹದರಲ್ಲಿ ಅತಿಥಿ ಉಪನ್ಯಾಸಕರು ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳ ಕಲಿಕೆಗೆ ಸಮಸ್ಯೆಯಾಗುತ್ತಿದೆ. ವಿದ್ಯಾರ್ಥಿಗಳು ಪಾಠದಿಂದ ವಂಚಿತರಾಗುತ್ತಿದ್ದಾರೆ. ಈ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಫೆಡರೇಷನ್‌ ಜಿಲ್ಲಾ ಅಧ್ಯಕ್ಷ ಅರುಣ ಕೋಡಗೆ, ಕಾರ್ಯದರ್ಶಿ ರೋಶನ್ ಮಲ್ಕಾಪೂರೆ, ಉಪಾಧ್ಯಕ್ಷ ಅಮರ ಗಾದಗಿ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT