ಬೀದರ್: ‘ಹುಮನಾಬಾದ್ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳಿಂದ ವಿಷಪೂರಿತ ರಾಸಾಯನಿಕ ಮಿಶ್ರಿತ ನೀರು ಬೇಕಾಬಿಟ್ಟಿ ಹರಿಸುತ್ತಿರುವುದರಿಂದ ಜನ ಹಾಗೂ ಜಾನುವಾರುಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ’ ಎಂದು ಸ್ವತಃ ಕೈಗಾರಿಕೋದ್ಯಮಿ ಆಗಿರುವ ಪರಮೇಶ್ವರ ಬೆಳಮಗಿ ಆರೋಪಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆಯಿಂದ ಸಂಜೆಯವರೆಗೆ ಯಾವುದೇ ಅಡೆತಡೆಯಿಲ್ಲದೆ ವಿಷಪೂರಿತ ನೀರು ಹರಿಸಲಾಗುತ್ತಿದೆ. ಇದರಿಂದ ನೆರೆಯ ಕೈಗಾರಿಕೆಗಳಿಗೆ ಸಮಸ್ಯೆಯಾಗುತ್ತಿದೆ ಎಂದರು.

ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು, ಮಾಲಿನ್ಯ ನಿಯಂತ್ರಣ ಮಂಡಳಿಗೆ ಪತ್ರ ಬರೆದರೂ ಪ್ರಯೋಜನವಾಗಿಲ್ಲ. ಕೈಗಾರಿಕೆ ವಿರುದ್ಧ ಧ್ವನಿ ಎತ್ತಿದರೆ ಅವರಿಗೆ ತೊಂದರೆ ಕೊಡಲಾಗುತ್ತಿದೆ. ಈಗಾಗಲೇ ಈ ಭಾಗದ 11 ಕೈಗಾರಿಕೆಗಳನ್ನು ಬಂದ್ ಮಾಡಲಾಗಿದೆ. ವಾತಾವರಣ ಕಲುಷಿತಗೊಳಿಸುತ್ತಿರುವ ಕೈಗಾರಿಕೆಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪಾರ್ವತಿ ಪರಮೇಶ್ವರ ಬೆಳಮಗಿ, ಪ್ರವೀಣ ಕೋಮಲ್, ಪ್ರಸನ್ನ ಕೋಮಲ್, ಮಲ್ಲಿನಾಥ ಬಿಲಗುಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.