ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ನಾಮಫಲಕಕ್ಕೆ ಉದಾಸೀನವೇಕೆ?: ಜಗದೀಶ ಬಿರಾದಾರ

Published 12 ಮಾರ್ಚ್ 2024, 16:25 IST
Last Updated 12 ಮಾರ್ಚ್ 2024, 16:25 IST
ಅಕ್ಷರ ಗಾತ್ರ

ಬೀದರ್‌: ‘ಸರ್ಕಾರದ ಸುತ್ತೋಲೆ ಪ್ರಕಾರ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕನ್ನಡ ನಾಮಫಲಕ ಅಳವಡಿಸಲಾಗುತ್ತಿದೆ. ಆದರೆ, ಜಿಲ್ಲೆಯಲ್ಲಿ ಉದಾಸೀನ ಮಾಡಲಾಗುತ್ತಿದೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಕಾರ್ಯದರ್ಶಿ ಜಗದೀಶ ಬಿರಾದಾರ ಆರೋಪಿಸಿದರು.

ಅಂಗಡಿ ಮುಂಗಟ್ಟುಗಳ ನಾಮಫಲಕಗಳ ಮೇಲೆ  ಶೇ 60ರಷ್ಟು ಕನ್ನಡ ಬರಹ ಇರಬೇಕು. ಆದರೆ, ಜಿಲ್ಲೆಯ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಕಾಳಜಿ ತೋರಿಸುತ್ತಿಲ್ಲ. ಅವರ ಮೇಲೆ ಒತ್ತಡ ಏನಾದರೂ ಇದೆಯಾ? ನೀವು ಕನ್ನಡಿಗರಲ್ವಾ? ಎಂದು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

ನಿಮಗೆ ಭಯ ಇದ್ದರೆ ನಮಗೆ ತಿಳಿಸಿ, ಎಲ್ಲರೂ ಕೂಡಿ ಕನ್ನಡ ನಾಮಫಲಕ ಅಳವಡಿಸುವ ಕಾರ್ಯ ಮಾಡೋಣ. ಸಭೆ ಕರೆದು ನಗರಸಭೆ ಆಯುಕ್ತರಿಗೆ ತಿಳಿಸಲು ಹಿಂದೇಟು ಹಾಕುತ್ತಿರುವುದು ಏಕೆ? ಮಾರ್ಚ್‌ 25ರ ಒಳಗೆ ಅಂಗಡಿ ಮುಂಗಟ್ಟುಗಳ ಮೇಲೆ ಶೇ. 60ರಷ್ಟು ಕನ್ನಡ ನಾಮಫಲಕಗಳು ರಾರಾಜಿಸಬೇಕು. ಇಲ್ಲದಿದ್ದರೆ ನಗರಸಭೆಗೆ ಮುತ್ತಿಗೆ ಹಾಕಿ ಹೋರಾಟ ಮಾಡಲಾಗುವುದು. ಅನ್ಯಭಾಷೆಯ ನಾಮಫಲಕ ಪುಡಿಪುಡಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. 

ವೇದಿಕೆಯ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳ, ಪ್ರಮುಖರಾದ ಭರತನಾಗ್ ಕಾಂಬಳೆ, ವಿಶ್ವನಾಥ ಗೌರ್, ಸಚಿನ್ ಜಟಗೊಂಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT