ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಸವ ನಾಡಿನಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

Published : 5 ಸೆಪ್ಟೆಂಬರ್ 2024, 16:25 IST
Last Updated : 5 ಸೆಪ್ಟೆಂಬರ್ 2024, 16:25 IST
ಫಾಲೋ ಮಾಡಿ
Comments

ಬೀದರ್‌: ‘ಜಗತ್ತಿಗೆ ಪ್ರಪ್ರಥಮ ಬಾರಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಬಸವಣ್ಣನವರ ನಾಡಿನಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ನೀಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.

ಸೆಪ್ಟೆಂಬರ್ 15 ರಂದು ನಡೆಯಲಿರುವ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಂಜೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ ಸಭೆಯ ನಂತರ ಮಾತನಾಡಿದರು.

ಪ್ರಜಾಪ್ರಭುತ್ವ ದಿನಾಚರಣೆ ಐತಿಹಾಸಿಕ ಕಾರ್ಯಕ್ರಮವಾಗಲಿದೆ. ಅರಣ್ಯ ಇಲಾಖೆಯಲ್ಲಿ ನರ್ಸರಿ ಸಸಿಗಳಿದ್ದು ಅವುಗಳನ್ನು ಮಾನವ ಸರಪಳಿ ಮಾಡಿ, ರಸ್ತೆಯಲ್ಲಿ ನೆಡಲಾಗುವುದು. ಕಾರ್ಯಕ್ರಮಕ್ಕೆ ಬೀದರ್‌ ಜಿಲ್ಲೆಯಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಅಧಿಕಾರಿಗಳು ಹಲವು ಭಾರಿ ಸಭೆಗಳನ್ನು ಮಾಡಿದ್ದಾರೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ., ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಉಪವಿಭಾಗಾಧಿಕಾರಿ ಸುರೇಖಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಸಿಂಧು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT