ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಔರಾದ್ | ಡೆಂಗಿ: ಮುನ್ನೆಚ್ಚರಿಕೆ ವಹಿಸಲು ಸಲಹೆ

Published 9 ಜುಲೈ 2024, 16:23 IST
Last Updated 9 ಜುಲೈ 2024, 16:23 IST
ಅಕ್ಷರ ಗಾತ್ರ

ಔರಾದ್: ‘ಮಳೆಗಾಲ ಇರುವುದರಿಂದ ಡೆಂಗಿ ಸೇರಿದಂತೆ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಗಾಯತ್ರಿ ಮನವಿ ಮಾಡಿದ್ದಾರೆ.

ಪಟ್ಟಣದ ವಿವಿಧೆಡೆ ನಿರು ಸಂಗ್ರಹದ ಬಗ್ಗೆ ಪರಿಶೀಲನೆ ಮಾಡಿ ಅವರು ಮಾತನಾಡಿದರು.

‘ಮಳೆ ನೀರು ನಿಲ್ಲುವುದು, ಟ್ಯೂಬ್, ಟಯರ್, ತೆಂಗಿನ ಚಿಪ್ಪು, ಅಗೆದ ತಗ್ಗು ಪ್ರದೇಶದಲ್ಲಿ, ಒಡೆದ ಪ್ಲಾಸಿಕ್, ಬಕೆಟ್, ಬುಟ್ಟಿ, ಕೊಡಗಳಲ್ಲಿ ಬಹು ದಿನಗಳ ವರೆಗೆ ನೀರು ಇದ್ದರೆ ಅಲ್ಲಿ ಸೊಳ್ಳೆ ಮೊಟ್ಟೆ ಇಡುತ್ತವೆ. ಹೀಗಾಗಿ ಸಾರ್ವಜನಿಕರು ತಮ್ಮ ಮನೆ ಸುತ್ತಮುತ್ತ ಹೊಲಸು ಪದಾರ್ಥ ಹಾಗೂ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಬೇಕು’ ಎಂದು ಅವರು ಸಲಹೆ ನೀಡಿದ್ದಾರೆ.

‘ಜ್ವರ, ವಾಂತಿ ಭೇದಿ ಕಂಡು ಬಂದರೆ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳಬೇಕು. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜ್ವರ ತಪಾಸಣೆ ಕೇಂದ್ರ ತೆರೆಯಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಶಾಸಕ ಚವಾಣ್ ಸೂಚನೆ: ‘ಡೆಂಗಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎಚ್ಚರ ವಹಿಸಬೇಕು. ಜ್ವರ ಎಂದು ಆಸ್ಪತ್ರೆಗೆ ಬಂದರೆ ತಕ್ಷಣ ತಪಾಸಣೆ ಮಾಡಿ ಸೂಕ್ತ ಚಿಕಿತ್ಸೆ ಕೊಡಬೇಕು. ತಾಲ್ಲೂಕು ಆಸ್ಪತ್ರೆ ಸೇರಿದಂತೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಸಿಬ್ಬಂದಿ ದಿನ ಪೂರ್ತಿ ಲಭ್ಯವಿರಬೇಕು. ಅಗತ್ಯ ಔಷಧ ದಾಸ್ತಾನು ಮಾಡಿಕೊಳ್ಳಬೇಕು. ಡೆಂಗಿ ಬಗ್ಗೆ ಜನರಲ್ಲಿ ತಿಳವಳಿಕೆ ಮೂಡಿಸಬೇಕು. ಗ್ರಾಮ ಪಂಚಾಯಿತಿಯವರು ಆರೋಗ್ಯ ಇಲಾಖೆ ಜತೆಗೂಡಿ ಕೆಲಸ ಮಾಡಬೇಕು’ ಎಂದು ಶಾಸಕ ಪ್ರಭು ಚವಾಣ್ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT