ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

ಪ್ರಥಮ ದರ್ಜೆ ಸಹಾಯಕ ಹುದ್ದೆ ಸ್ಪರ್ಧಾತ್ಮಕ ಪರೀಕ್ಷೆ
Last Updated 28 ಫೆಬ್ರುವರಿ 2021, 16:42 IST
ಅಕ್ಷರ ಗಾತ್ರ

ಬೀದರ್‌: ಜಿಲ್ಲೆಯ 27 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಿತು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ಜನವಾಡ ರಸ್ತೆಯಲ್ಲಿರುವ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಸಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. 1973ರ ಕಲಂ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಎಸ್.ಟಿ.ಡಿ. ಮೊಬೈಲ್ ಪೇಜರ್, ಜೆರಾಕ್ಸ್, ಟೈಪಿಂಗ್, ಟ್ರೇನಿಂಗ್ ಸೆಂಟರ್ ಹಾಗೂ ಡಿಟಿಪಿಗಳನ್ನು ಬಂದ್‌ ಮಾಡಲಾಗಿತ್ತು.

ಪರೀಕ್ಷಾ ಕೇಂದ್ರಗಳ ಸುತ್ತ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT