ಸೋಮವಾರ, ಜೂನ್ 21, 2021
27 °C

ಔರಾದ್‌: ಕೊಲೆ ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಔರಾದ್‌: ಜಮೀನು ವಿವಾದದ ಕಾರಣ ಯುವಕರೊಬ್ಬರನ್ನು ಕೊಲೆ ಮಾಡಿದ ಆರೋಪದಲ್ಲಿ ಔರಾದ್‌ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಸಂದೀಪ ದೇವರಾಜ ಮಚಕುರಿ ಹಾಗೂ ಆಕಾಶ ಲಕ್ಷ್ಮಣರಾವ್ ಬಿರಾದಾರ ಎನ್ನುವವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಆಗಸ್ಟ್‌ 15 ರಂದು ಬೆಳಿಗ್ಗೆ ಯುವಕನನ್ನು ಕೊಲೆ ಮಾಡಲಾಗಿತ್ತು. ಮುಂಗನಾಳ ಗ್ರಾಮದ ವೈಜಿನಾಥ ಮಚಕುರಿ ‍‍ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಔರಾದ್‌ ಸಿಪಿಐ ರಾಘವೇಂದ್ರ, ಪಿಎಸ್‌ಐ ಜಗದೀಶ ನಾಯ್ಕ, ಪೊಲೀಸ್‌ ಕಾನ್‌ಸ್ಟೆಬಲ್ ಶ್ರೀನಿವಾಸ, ಉಜ್ವಲಾ ಹಾಗೂ ಜೈಶ್ರೀ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸ್‌ ಪ್ರಕಟಣೆ ತಿಳಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.