ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜ್ಞಾನ ಆಸಕ್ತಿ ಬೆಳೆಸಿಕೊಳ್ಳಿ

ವಿಜ್ಞಾನ, ತಂತ್ರಜ್ಞಾನ ಮೇಳದಲ್ಲಿ ಮದಾನೆ ಸಲಹೆ
Last Updated 7 ಅಕ್ಟೋಬರ್ 2021, 13:52 IST
ಅಕ್ಷರ ಗಾತ್ರ

ಬೀದರ್: ವಿದ್ಯಾರ್ಥಿಗಳು ವಿಜ್ಞಾನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಮದಾನೆ ಸಲಹೆ ಮಾಡಿದರು.

ಅಗಸ್ತ್ಯ ಫೌಂಡೇಷನ್‍ನ ಕೋರ್ ವಿಜ್ಞಾನ ಚಟುವಟಿಕಾ ಕೇಂದ್ರದ ವತಿಯಿಂದ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಬಹಳಷ್ಟು ಸಾಧನೆಗಳು ಆಗಿವೆ ಎಂದು ತಿಳಿಸಿದರು.

ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಪಾಚಾರ್ಯ ವಿಠ್ಠಲದಾಸ ಪ್ಯಾಗೆ ಮಾತನಾಡಿ, ಆಧುನಿಕ ಯುಗದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಬಗ್ಗೆ ಹೆಚ್ಚು ತಿಳಿದುಕೊಳ್ಳಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಶಾಂತಕುಮಾರ ಭಾಲ್ಕೆ ಮಾತನಾಡಿ, ವಿದ್ಯಾರ್ಥಿಗಳು ಕಂಪ್ಯೂಟರ್ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.

ಕೋರ್ ವಿಜ್ಞಾನ ಚಟುವಟಿಕಾ ಕೇಂದ್ರದ ಮುಖ್ಯಸ್ಥ ಬಾಬುರಾವ್ ಎನ್.ಎಸ್ ಮಾತನಾಡಿ, ಅಗಸ್ತ್ಯ ಫೌಂಡೇಷನ್ ಜಿಲ್ಲೆಯ ಗ್ರಾಮೀಣ ಪ್ರದೇಶದ ಮಕ್ಕಳು, ಶಿಕ್ಷಕರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಹಾಗೂ ಕ್ರಿಯಾಶೀಲತೆ ಹೆಚ್ಚಿಸಲು ನಿರಂತರ ಶ್ರಮಿಸುತ್ತಿದೆ ಎಂದು ತಿಳಿಸಿದರು.

ಮಕ್ಕಳಿಗೆ ಹೊಸ ಯಂತ್ರಗಳು, ಕ್ರಿಟೈಲ್ ಕಿಟ್ ಎಂಜಿನಿಯರಿಂಗ್ ವಿಭಾಗದಲ್ಲಿ ಬರುವ ಹಲವು ತಂತ್ರಜ್ಞಾನ ಹಾಗೂ ಎಲೆಕ್ಟ್ರಾನಿಕ್ಸ್ ಕುರಿತು ಅರಿವು ಮೂಡಿಸಲು ಮೇಳ ಸಂಘಟಿಸಲಾಗಿದೆ ಎಂದು ಹೇಳಿದರು.

ವಿಜ್ಞಾನ ಶಿಕ್ಷಕ ಸಂಜುಕುಮಾರ ಉಪಸ್ಥಿತರಿದ್ದರು. ತಾಜೊದ್ದಿನ್ ಸ್ವಾಗತಿಸಿದರು. ಬಸಪ್ಪ ಪೂಜಾರಿ ನಿರೂಪಿಸಿದರು.
ವಿದ್ಯಾರ್ಥಿಗಳು ವಿವಿಧ ಯಂತ್ರೋಪಕರಣಗಳ ಮಾಹಿತಿ ನೀಡಿ ಗಮನ ಸೆಳೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT