ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಕಾಮಗಾರಿ ಬೇಗ ಪೂರ್ಣಗೊಳಿಸಿ: ಸಿಇಒ ಸೂಚನೆ

ಎಚ್‌ಕೆಆರ್‌ಡಿಬಿ ಕಾಮಗಾರಿಗಳ ಪ್ರಗತಿ ಪರಿಶೀಲನೆ
Last Updated 10 ಮೇ 2019, 12:42 IST
ಅಕ್ಷರ ಗಾತ್ರ

ಬೀದರ್: ‘ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದ ಅಡಿಯಲ್ಲಿ ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದ ಅಡಿಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ನಮ್ಮ ಹೊಲ ನಮ್ಮ ರಸ್ತೆ ಯೋಜನೆಯಡಿ ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಇದೇ ತಿಂಗಳ ಒಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. 2017 ರ ವರೆಗಿನ ಎಲ್ಲ ಕಾಮಗಾರಿಗಳನ್ನು ಜೂನ್ 8 ರ ಒಳಗೆ ಮುಗಿಸಲು ಪ್ರಯತ್ನಿಸಬೇಕು’ ಎಂದು ತಿಳಿಸಿದರು.

‘ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪಂಚಾಯತ್‌ರಾಜ್‌ ಎಂಜಿನಿಯರಿಂಗ್ ಇಲಾಖೆ, ಕೆಆರ್‍ಐಡಿಎಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ವಾರಕ್ಕೊಮ್ಮೆ ಸಭೆ ನಡೆಸಿ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಬೇಕು. ಸಂಬಂಧಿಸಿದ ಅಧಿಕಾರಿಗಳು ಅನುಷ್ಠಾನಾಧಿಕಾರಿಗಳ ಸಂಪರ್ಕದಲ್ಲಿ ಇರಬೇಕು. ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಮುತುವರ್ಜಿ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಅಂಗನವಾಡಿ ಕಟ್ಟಡ, ವಿದ್ಯಾರ್ಥಿ ನಿಲಯ, ಶಾಲಾ ಕಟ್ಟಡ, ಶೌಚಾಲಯಗಳನ್ನು ಪೂರ್ಣಗೊಳಿಸಲು ಪ್ರಥಮಾದ್ಯತೆ ನೀಡಬೇಕು. ಈಗಾಗಲೇ ಪ್ರಗತಿಯಲ್ಲಿ ಇರುವ ಎಲ್ಲ ರಸ್ತೆ ಕಾಮಗಾರಿಗಳನ್ನು ಮಳೆಗಾಲ ಆರಂಭವಾಗುವ ಮುನ್ನ ಮುಕ್ತಾಯಗೊಳಿಸಬೇಕು’ ಎಂದು ಹೇಳಿದರು.

‘ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಸಾಕಷ್ಟು ಅನುದಾನ ದೊರೆಯುತ್ತಿದೆ. ಇದರ ಸದುಪಯೋಗ ಆಗಬೇಕು. ಎಲ್ಲ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಿ. ಶಿವಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮಂಜುನಾಥ, ಶಿಕ್ಷಣ ಇಲಾಖೆಯ ಅಧಿಕಾರಿ ಶಿವಕುಮಾರ ಸ್ವಾಮಿ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT