ಭಾನುವಾರ, ಸೆಪ್ಟೆಂಬರ್ 19, 2021
27 °C

ಭಾನುವಾರ ಮತ್ತೊಮ್ಮೆ ದಿಗ್ವಿಜಯ ರಥಯಾತ್ರೆ; 10 ಸಾವಿರ ಜನ ಸೇರುವ ನಿರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೀದರ್‌: ‘ಷಿಕಾಗೊದಲ್ಲಿ ಸ್ವಾಮಿ ವಿವೇಕಾನಂದರು ಭಾಷಣ ಮಾಡಿ 125 ವರ್ಷ ಕಳೆದ ಪ್ರಯುಕ್ತ ಯುವ ಬ್ರಿಗೇಡ್‌ ಮತ್ತು ಸಹೋದರಿ ನಿವೇದಿತಾ ಪ್ರತಿಷ್ಠಾನದಿಂದ ಅ.14ರಂದು ಬೀದರ್ ಹಾಗೂ ಹುಮನಾಬಾದ್‌ನಲ್ಲಿ ಮತ್ತೊಮ್ಮೆ ದಿಗ್ವಿಜಯ ರಥಯಾತ್ರೆ ಆಯೋಜಿಸಲಾಗಿದೆ’ ಎಂದು ಬ್ರಿಗೇಡ್‌ ರಾಜ್ಯ ಸಹ ಸಂಚಾಲಕ ಮನೋಹರ ಕೌಶಿಕ್‌ ತಿಳಿಸಿದರು.

ವಿವೇಕಾನಂದರ ವಿಚಾರಧಾರೆಗಳನ್ನು ಯುವಜನರಿಗೆ ಮನದಟ್ಟು ಮಾಡಲು ರಥ ಯಾತ್ರೆ ಹಮ್ಮಿಕೊಳ್ಳಲಾಗಿದೆ.
ಆಗಸ್ಟ್‌ 28 ರಂದು ಆನೆಕಲ್‌ನಿಂದ ಶುರುವಾಗಿರುವ ಯಾತ್ರೆ ಅಕ್ಟೋಬರ್‌ 28 ರಂದು ಇಳಕಲ್‌ನಲ್ಲಿ ಮುಕ್ತಾಯಗೊಳ್ಳಲಿದೆ. ಯುವಕರನ್ನು ದೇಶ ಸೇವೆಗೆ ಪ್ರೇರೇಪಿಸುವುದು ರಥಯಾತ್ರೆಯ ಉದ್ದೇಶವಾಗಿದೆ’ ಎಂದು ನಗರದಲ್ಲಿ ಗುರುವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.

‘ರಥಯಾತ್ರೆ ಅಂಗವಾಗಿ ಭಾನುವಾರ ಬೆಳಿಗ್ಗೆ 8.30ಕ್ಕೆ ಬೀದರ್‌ನ ಗುರದ್ವಾರ ಗೇಟ್‌ನಿಂದ ಸಾಯಿ ಸ್ಕೂಲ್‌ ವರೆಗೆ ಶೋಭಾಯಾತ್ರೆ ನಡೆಯಲಿದೆ. ಬಸವ ಮುಕ್ತಿ ಮಂದಿರದ ಶಿವಯೋಗೀಶ್ವರ ಸ್ವಾಮೀಜಿ ಚಾಲನೆ ನೀಡುವರು. ಶಾಸಕ ರಹೀಂ ಖಾನ್, ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಜಿ.ಶೆಟಕಾರ, ಗಾಂಧಿ ಗಂಜ್ನ ದಿ ಗ್ರೇನ್‌ ಆ್ಯಂಡ್‌ ಸೀಡ್ಸ್‌ಮರ್ಚಂಟ್ಸ್‌ ಅಸೋಸಿಯೇಷನ್ ಅಧ್ಯಕ್ಷ ಬಸವರಾಜ ಧನ್ನೂರ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.

‘ಅಂದು ಬೆಳಿಗ್ಗೆ 9.30ಕ್ಕೆ ಸಾಯಿ ಸ್ಕೂಲ್‌ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಅಕ್ಕ ಅನ್ನಪೂರ್ಣ ಹಾಗೂ ರಾಮಕೃಷ್ಣ ವಿವೇಕಾನಂದ ಆಶ್ರಮದ ಜ್ಯೋತಿರ್ಮಯಾನಂದ ಮಹಾರಾಜ ಸಾನ್ನಿಧ್ಯ ವಹಿಸಲಿದ್ದಾರೆ.

ಚಿಂತಕ ಚಕ್ರವರ್ತಿ ಸೂಲಿಬೆಲೆ ಪ್ರಮುಖ ಭಾಷಣ ಮಾಡುವರು. ಗುರುದ್ವಾರ ಪ್ರಬಂಧಕ ಕಮಿಟಿಯ ಅಧ್ಯಕ್ಷ ಡಾ.ಎಸ್.ಬಲಬೀರ್ ಸಿಂಗ್‌, ಕೆ.ಆರ್‌.ಇ ಸಂಸ್ಥೆಯ ಅಧ್ಯಕ್ಷ ಡಾ.ಬಸವರಾಜ ಪಾಟೀಲ ಹಾಗೂ ಮಾತೆ ಮಾಣಿಕೇಶ್ವರಿ ಪ.ಪೂ. ಕಾಲೇಜಿನ ಅಧ್ಯಕ್ಷ ರಮೇಶ ಕುಲಕರ್ಣಿ ಪಾಲ್ಗೊಳ್ಳುವರು’ ಎಂದು ವಿವರಿಸಿದರು.

‘ಹುಮನಾಬಾದ್‌ನಲ್ಲಿ ಮಧ್ಯಾಹ್ನ 2.30ಕ್ಕೆ ಪ್ರವಾಸಿ ಮಂದಿರದಿಂದ ತೇರ ಮೈದಾನದ ವರೆಗೆ ಶೋಭಾ ಯಾತ್ರೆ ನಡೆಯಲಿದೆ. ಸಾಯಂಕಾಲ 4 ಗಂಟೆಗೆ ತೇರ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಜ್ಯೋತಿರ್ಮಯಾನಂದ ಸ್ವಾಮೀಜಿ ಹಾಗೂ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ವಹಿಸುವರು’ ಎಂದು ಹೇಳಿದರು.

‘ಇಟಗಾದ ಚನ್ನಮಲ್ಲೇಶ್ವರ, ಹುಮನಾಬಾದ್‌ನ ರೇಣುಕ ಗಂಗಾಧರ ಶಿವಾಚಾರ್ಯ, ಬಸವಕಲ್ಯಾಣದ ಘನಲಿಂಗ ರುದ್ರಮುನಿ ಶಿವಾಚಾರ್ಯ, ನಿವೃತ್ತ ಕರ್ನಲ್‌ ಶರಣಪ್ಪ ಸಿಕೆನಪುರೆ, ಹುಮನಾಬಾದ್‌ನ ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಾಣಿಕಪ್ಪ ಗಾದಾ ಪಾಲ್ಗೊಳ್ಳುವರು. ವಾಗ್ಮಿ ಚಕ್ರವರ್ತಿ ಸೂಲಿಬೆಲೆ ದಿಕ್ಸೂಚಿ ಭಾಷಣ ಮಾಡುವರು’ ಎಂದು ತಿಳಿಸಿದರು.

ರೇವಣಸಿದ್ದಪ್ಪ ಜಲಾದೆ, ಶ್ರೀಕಾಂತ ಕೊಳ್ಳೂರ, ಶಾಂತಕುಮಾರ ಸಂಗೋಳಗಿ, ವೀರಯ್ಯಸ್ವಾಮಿ ಹಾಗೂ ಶ್ರೀನಿವಾಸ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು