ಮಂಗಳವಾರ, ಜೂನ್ 22, 2021
24 °C
ಶಾಸಕ ರಾಜಶೇಖರ ಪಾಟೀಲ ಎಚ್ಚರಿಕೆ

ಕಾಮಗಾರಿ ಕಳಪೆಯಾದರೆ ಶಿಸ್ತು ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಮನಾಬಾದ್: ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೂಳಿಸಬೇಕು. ಕಾಮಗಾರಿ ಕಳಪೆಯಿಂದ ಕೂಡಿದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ರಾಜಶೇಖರ ಪಾಟೀಲ ಎಚ್ಚರಿಕೆ ನೀಡಿದರು.

ತಾಲ್ಲೂಕಿನ ಹಳ್ಳಿಖೇಡ್ ಬಿ. ಪಟ್ಟಣಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.

ಎಸ್.ಎಫ್.ಸಿ. ಯೋಜನೆ ಅಡಿಯಲ್ಲಿ ಪುರಸಭೆ ಕಚೇರಿಯ ಕಟ್ಟಡವನ್ನು ಸುಮಾರು ₹1.63 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ನಗರೋತ್ಥನಾ ಯೋಜನೆ ಅಡಿಯಲ್ಲಿ ಸಿ.ಸಿ ರಸ್ತೆ ನಿರ್ಮಾಣವಾಗುತ್ತಿವೆ. ಈ ಕಾಮಗಾರಿಗಳನ್ನು ಉತ್ತಮ ರೀತಿಯಿಂದ ಪೂರ್ಣಗೂಳ್ಳಬೇಕು ಎಂದು ಹೇಳಿದರು.

ಸಾರ್ವಜನಿಕರು ಕೋವಿಡ್ ನಿಮಗಳನ್ನು ಪಾಲಿಸಿ ಸುರಕ್ಷತೆಯಿಂದ ಇರಬೇಕು. ಕೆಮ್ಮು, ನೆಗಡಿ, ಜ್ವರ ಕಂಡುಬಂದರೆ ತಕ್ಷಣ ವೈದ್ಯರಿಂದ ಸಲಹೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಪಟ್ಟಣದಲ್ಲಿ ಪುರಸಭೆ ವತಿಯಿಂದ ಕೋವಿಡ್ ಜಾಗೃತಿ ಮೂಡಿಸಬೇಕು. ಪಟ್ಟಣ ಸ್ವಚ್ಛತೆಯಿಂದ ಕಾಪಾಡಬೇಕು. ನಾಗರಿಕರಿಗೆ ಕುಡಿಯುವ ನೀರು ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳನ್ನು ಖರೀದಿಸಲು ಸಮಸ್ಯೆ ಉಂಟಾಗದಂತೆ ನೋಡಿಕೊಳಬೇಕು ಎಂದು ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಪುರಸಭೆ ಅಧ್ಯಕ್ಷ ಮಾಹಾಂತಯ್ಯ ತೀರ್ಥ, ಉಪಾಧ್ಯೆಕ್ಷೆ ಹುರ್‍ಮಂತ್ ಬೇಗಂ, ಯೂಸೂಫ್ ಸೌದಾಕರ್, ಚಾಂದ್‌ ಖುರೇಶಿ, ಸಾಜಿತ್ತ್ ಪಟೇಲ್, ರಜಾಕ್ ಮಸೂಲ್ದಾರ್, ಗೌಸ್ ರಾಜಮಿಯ್ಯಾ, ವಿಜಯಕುಮಾರ ಜಗದಾಳೆ, ಪುರಸಭೆ ಮುಖ್ಯಾಧಿಕಾರಿ ಮಹಮ್ಮದ್ ಯೂಸೂಫ್, ಕಿರಿಯ ಎಂಜಿನಿಯರ್‌ ಅಶ್ವಿನಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.