ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯವಸ್ಥಿತವಾಗಿ ಬಿತ್ತನೆ ಬೀಜ ವಿತರಿಸಿ

ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಸೂಚನೆ
Last Updated 1 ಜೂನ್ 2021, 14:56 IST
ಅಕ್ಷರ ಗಾತ್ರ

ಬೀದರ್‌: ಜಿಲ್ಲೆಯಲ್ಲಿ ರೈತರಿಗೆ ವ್ಯವಸ್ಥಿತವಾಗಿ ಬಿತ್ತನೆ ಬೀಜ ವಿತರಣೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರೈತರು ಬಿತ್ತನೆಯ ತಯಾರಿಯಲ್ಲಿದ್ದಾರೆ. ಜೂನ್ 3ರಿಂದಲೇ ಬೀಜ ವಿತರಣೆ ಆರಂಭಿಸುವಂತೆ ನಿರ್ದೇಶನ ನೀಡಲಾಗಿದೆ. ರೈತರು ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಪಾಲಿಸಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ತೆರಳಿ ಬಿತ್ತನೆ ಬೀಜ ಪಡೆಯಬೇಕು ಎಂದು ರೈತರಲ್ಲಿ ಮನವಿ ಮಾಡಿದ್ದಾರೆ.

ಬೀಜ ವಿತರಣೆ ವೇಳೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಕೋವಿಡ್-19 ನಿಯಂತ್ರಣ ಮಾರ್ಗಸೂಚಿಗಳು ಕಡ್ಡಾಯವಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಿಬ್ಬಂದಿಗೆ ಸೂಚಿಸಿದ್ದಾರೆ.

ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ ಮತ್ತು ರಸಗೊಬ್ಬರಗಳಿಗೆ ಸರ್ಕಾರ ನಿಗದಿಪಡಿಸಿರುವ ಬೆಲೆಯ ಫಲಕಗಳನ್ನು ಸರಿಯಾಗಿ ಕಾಣುವಂತೆ ಪ್ರದರ್ಶಿಸಬೇಕು. ಬೀಜ ಮತ್ತು ಗೊಬ್ಬರಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದಲ್ಲಿ ಸಂಬಂದಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಸಿದ್ದಾರೆ.

ಜಿಲ್ಲೆಗೆ ಬಂದಿರುವ ಬೀಜಗಳು ನಮ್ಮ ರೈತರಿಗೆ ಮಾತ್ರ ಸಿಗಬೇಕು. ಬೀಜಗಳನ್ನು ಮಹಾರಾಷ್ಟ್ರ, ಮತ್ತಿತರೆಡೆ ಸಾಗಿಸುವುದು ಕಂಡು ಬಂದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT